ರಾಜ್ಯದಲ್ಲಿ ಕೌಶಲ ವಿ.ವಿ: ಚಿಂತನೆ

7
ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ

ರಾಜ್ಯದಲ್ಲಿ ಕೌಶಲ ವಿ.ವಿ: ಚಿಂತನೆ

Published:
Updated:

ಕಾರವಾರ: ರಾಜ್ಯದಲ್ಲಿ ‘ಕೌಶಲ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಕುರಿತು ಟಾಟಾ ಶೈಕ್ಷಣಿಕ ಸಮೂಹ ಸಂಸ್ಥೆಯ ಸಹಕಾರ ಪಡೆಯಲೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

72ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕೌಶಲಾಭಿವೃದ್ಧಿ ಇಲಾಖೆಯಿಂದ 2.5 ಲಕ್ಷ ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಿಗೆ ಕೆಲಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ನೂತನವಾಗಿ ರಚನೆಯಾದ 50 ತಾಲ್ಲೂಕುಗಳ ಪೈಕಿ 32ರ ಕಚೇರಿಗಳಲ್ಲಿ ‘ಭೂಮಿ’ ತಂತ್ರಜ್ಞಾನ ಅಳವಡಿಸಲಾಗಿದೆ. ಉಳಿದ 12 ತಾಲ್ಲೂಕುಗಳಲ್ಲಿ ಶೀಘ್ರವೇ ಅಳವಡಿಸಲಾಗುವುದು. ಅವುಗಳಲ್ಲಿ ವಿವಿಧ ಕಚೇರಿಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !