‘ಗೌರಿ ಪ್ರಕರಣದಲ್ಲಿ ಸರ್ಕಾರದಿಂದ ಉತ್ತಮ ಕೆಲಸ’

7
ಗೃಹ ಸಚಿವ ಪರಮೇಶ್ವರಗೆ ಕವಿತಾ ಲಂಕೇಶ್‌ ಅಭಿನಂದನೆ

‘ಗೌರಿ ಪ್ರಕರಣದಲ್ಲಿ ಸರ್ಕಾರದಿಂದ ಉತ್ತಮ ಕೆಲಸ’

Published:
Updated:

ಬೆಂಗಳೂರು: ‘ವಿಚಾರವಾದಿಗಳಾದ ದಾಬೋಲ್ಕರ್, ಗೋವಿಂದ ಪನ್ಸಾರೆ ಹತ್ಯೆ ಪ್ರಕರಣಗಳು ಇನ್ನೂ ಬೆಳಕಿಗೆ ಬಂದಿಲ್ಲ. ಆ ಪ್ರಕರಣಗಳ ತನಿಖೆಯ ಪ್ರಗತಿ ನೋಡಿದರೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸುವ ವಿಷಯದಲ್ಲಿ ಕರ್ನಾಟಕ ಸರ್ಕಾರ ಉತ್ತಮ ಕೆಲಸ ಮಾಡಿದೆ’ ಎಂದು ಕವಿತಾ ಲಂಕೇಶ್ ಹೇಳಿದರು.

ಗೃಹ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರನ್ನು ಮಂಗಳವಾರ ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಗೌರಿ ಹತ್ಯೆಗೂ ಎಂ.ಎಂ. ಕಲಬುರ್ಗಿ ಹತ್ಯೆಗೂ ಸಂಬಂಧ ಇದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವರು ಹೇಳಿದ್ದಾರೆ’ ಎಂದರು.

‘ಗೌರಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಹತ್ಯೆಗೆ ಬಳಸಿದ ಗನ್ ಸಿಕ್ಕಿಲ್ಲ. ಅದು ಸಿಕ್ಕರೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತದೆ’ ಎಂದರು.

‘ಗೌರಿ ಹತ್ಯೆ ಪ್ರಕರಣದಲ್ಲಿ ಹಿಂದೂವಾದಿಗಳು ಭಾಗಿಯಾಗಿದ್ದಾರೆ ಎಂಬ ವಿಚಾರದಲ್ಲಿ ಕೆಲವರು ತಗಾದೆ ತೆಗೆದಿದ್ದಾರೆ. ಆದರೆ, ಕೊಲೆಗಾರ ಕೊಲೆಗಾರನೇ. ತಪ್ಪು ಮಾಡಿ ಯಾರೂ ತಪ್ಪಿಸಿಕೊಳ್ಳಲು ಆಗುವುದಿಲ್ಲ. ‌ತನಿಖೆ ಪೂರ್ಣಗೊಂಡ ಬಳಿಕ ಸತ್ಯ ಹೊರಬರಲಿದೆ’ ಎಂದರು.

ಬರಹ ಇಷ್ಟವಾಯಿತೆ?

 • 6

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !