ಗೌರಿ ಲಂಕೇಶ್‌ ಹತ್ಯೆ ಪ್ರಕರಣಆರೋಪಿ ಬಂಧನ, ಇಬ್ಬರ ವಶ?

7
ಎಸ್‌ಐಟಿ ಪೊಲೀಸರು

ಗೌರಿ ಲಂಕೇಶ್‌ ಹತ್ಯೆ ಪ್ರಕರಣಆರೋಪಿ ಬಂಧನ, ಇಬ್ಬರ ವಶ?

Published:
Updated:

ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ವಿಶೇಷ ತನಿಖಾ ದಳದ (ಎಸ್‌ಐಟಿ) ಪೊಲೀಸರು ಬುಧವಾರ ಬಂಧಿಸಿ, ಇಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

‘ಬಂಧಿತ ಇಲ್ಲಿನ ಮಹಾದ್ವಾರ ರಸ್ತೆ ಸಂಭಾಜಿ ಗಲ್ಲಿಯ ನಿವಾಸಿ ಭರತ್‌ ಎನ್ನಲಾಗುತ್ತಿದೆ. ಪ್ರಕರಣದ ಆರೋಪಿ ಪರಶುರಾಮ ವಾಗ್ಮೋರೆಗೆ ಆಶ್ರಯ ಕೊಟ್ಟಿದ್ದ ಆರೋಪದ ಮೇಲೆ ಬಂಧಿಸಲಾಗಿದೆ’ ಎನ್ನಲಾಗುತ್ತಿದೆ. ವಶಪಡಿಸಿಕೊಂಡಿರುವವರ ಮಾಹಿತಿ ಲಭ್ಯವಾಗಿಲ್ಲ.

‘ಪ್ರಕರಣದ ಮತ್ತೊಬ್ಬ ಆರೋಪಿ, ಪುಣೆಯ ಅಮೋಲ್ ಕಾಳೆ ಇಲ್ಲಿನ ಮನೆಯೊಂದರಲ್ಲಿ ವಾಸವಿದ್ದ ಎನ್ನುವ ಮಾಹಿತಿ ತನಿಖೆಯಿಂದ ಗೊತ್ತಾಗಿದೆ. ವಾಗ್ಮೋರೆ ಹಾಗೂ ಕಾಳೆ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ’ ಎಂದು ಹೇಳಲಾಗುತ್ತಿದೆ.

‘ಬೆಳಗಾವಿಯಲ್ಲಿ ಬಂದೂಕು ತರಬೇತಿ ನೀಡಲಾಗಿತ್ತು’ ಎಂದು ಆರೋಪಿ ಪರುಶರಾಮ ವಾಘ್ಮೋರೆ ವಿಚಾರಣೆ ವೇಳೆ ತಿಳಿಸಿದ್ದ. ಇದನ್ನು ಆಧರಿಸಿ, ಎಸ್ಐಟಿಯವರು ಆತನನ್ನು ಹೋದ ತಿಂಗಳು ನಗರಕ್ಕೆ ಕರೆತಂದಿದ್ದರು. ಬಂದೂಕು ತರಬೇತಿ ನೀಡಲಾಗಿತ್ತು ಎನ್ನಲಾದ ಖಾನಾಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಮಾಹಿತಿ ಕಲೆ ಹಾಕಿದ್ದರು.

‘ಎಸ್‌ಐಟಿಯವರು ನಗರದಲ್ಲಿ ಯಾರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಇಲ್ಲ. ಅವರು ನಮ್ಮನ್ನು ಸಂಪರ್ಕಿಸಿಲ್ಲ’ ಎಂದು ನಗರ ಪೊಲೀಸ್‌ ಆಯುಕ್ತ ಡಿ.ಸಿ. ರಾಜಪ್ಪ ಪ್ರತಿಕ್ರಿಯಿಸಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !