7

ಗೌರಿ ಹತ್ಯೆ; ವಿಶೇಷ ಪ್ರಾಸಿಕ್ಯೂಟರ್‌ ನೇಮಕ

Published:
Updated:

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಾದ ಮಂಡಿಸಲು ವಕೀಲ ಶ್ರೀಶೈಲ ವಡವಡಗಿ ಅವರನ್ನು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಗೃಹ ಇಲಾಖೆ ನೇಮಕ ಮಾಡಿದೆ.

ಈ ಸಂಬಂಧ ಇಲಾಖೆ ಹೊರಡಿಸಿರುವ ಆದೇಶದ ಪ್ರತಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಟಿ.ಎಂ.ನರೇಂದ್ರ ಅವರು 70ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಶನಿವಾರ ಸಲ್ಲಿಸಿದರು.

ವಡವಡಗಿ ಅವರು ನಿವೃತ್ತ ಪಬ್ಲಿಕ್‌ ಪ್ರಾಸಿಕ್ಯೂಟರ್‌. ಬಿಡದಿಯ ಧ್ಯಾನಪೀಠದ ಭಕ್ತೆಯ ಮೇಲಿನ ಅತ್ಯಾಚಾರ ಸೇರಿದಂತೆ ಸಿಐಡಿಯ ಹಲವು ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. 

ಸಾಕ್ಷ್ಯ ನಾಶಕ್ಕೆ ಯತ್ನ: ಆರೋಪಿ ಕೆ.ಟಿ.ನವೀನ್‌ಕುಮಾರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಶನಿವಾರ ಕೈಗೆತ್ತಿಕೊಂಡಿತ್ತು.

ವಿಶೇಷ ಪ್ರಾಸಿಕ್ಯೂಟರ್‌ ಟಿ.ಎಂ.ನರೇಂದ್ರ, ‘ನ್ಯಾಯಾಂಗ ಬಂಧನದಲ್ಲಿರುವ ನವೀನ್‌ಕುಮಾರ್, ಸಾಕ್ಷಿದಾರರೊಬ್ಬರಿಗೆ ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಸಾಕ್ಷ್ಯ ನಾಶಕ್ಕೂ ಪ್ರಯತ್ನಿಸುತ್ತಿದ್ದಾರೆ. ಆತನಿಗೆ ಜಾಮೀನು ನೀಡಬಾರದು’ ಎಂದು ಕೋರಿದರು.

ಅದನ್ನು ಆಲಿಸಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !