ಶುಕ್ರವಾರ, ಆಗಸ್ಟ್ 7, 2020
23 °C

ಗ್ರಾ.ಪಂ: ಮತದಾರರ ಪಟ್ಟಿ ತಯಾರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೊರೊನಾ ಪರಿಸ್ಥಿತಿ ನೋಡಿಕೊಂಡು ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್‌ನಲ್ಲಿ ಚುನಾವಣೆ ನಡೆಸುವ ಸಾಧ್ಯತೆಯನ್ನು ರಾಜ್ಯ ಚುನಾವಣಾ ಆಯೋಗ ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಿದ್ದು, ಅದಕ್ಕೆ ಸಜ್ಜಾಗುವ ನಿಟ್ಟಿನಲ್ಲಿ ಮತದಾರರ ಪಟ್ಟಿ ಸಿದ್ಧಪಡಿಸುವ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಇದೇ 13ರಿಂದ 18ರವರೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮತದಾರರನ್ನು ಗುರುತಿಸಬೇಕು. 20ರಿಂದ 29ರವರೆಗೆ ಮನೆಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಮತದಾರರನ್ನು ಗುರುತಿಸಬೇಕು. ಆಗಸ್ಟ್‌ 5ರೊಳಗೆ ಮುದ್ರಕರಿಂದ ಪ್ರಥಮ ಚೆಕ್‌ ಲಿಸ್ಟ್‌ ಪಡೆದುಕೊಂಡು ಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲಿಸಬೇಕು. ಆ.6ರಂದು ಕರಡು ಮತದಾರರ ಪಟ್ಟಿಯನ್ನು ಮುದ್ರಕರಿಂದ ಪಡೆಯಬೇಕು. ಆ.7ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು. ಆ.14ರೊಳಗೆ ಆಕ್ಷೇಪಣೆ ಸಲ್ಲಿಸಬೇಕು. ಆ.24ರೊಳಗೆ ಅಕ್ಷೇಪಣೆಗಳನ್ನು ಇತ್ಯರ್ಥಪಡಿಸಬೇಕು. ಆ.30ರಂದು ಅಂತಿಮ ಚೆಕ್‌ಲಿಸ್ಟ್‌ ಪಡೆದು ಪರಿಶೀಲಿಸಬೇಕು ಹಾಗೂ ಆ.31ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು