ಬುಧವಾರ, ಜುಲೈ 28, 2021
29 °C
ಹೈಕೋರ್ಟ್‌ಗೆ ಚುನಾವಣಾ ಆಯೋಗದ ಹೇಳಿಕೆ

ಗ್ರಾಮ ಪಂಚಾಯತಿ ಚುನಾವಣೆ: ಅಕ್ಟೋಬರ್‌ನಲ್ಲಿ ತೀರ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಿಸುವ ಸಂಬಂಧ ಅಕ್ಟೋಬರ್ ಮೊದಲ ವಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ಗೆ ತಿಳಿಸಿದೆ.

ಈ ಕುರಿತು ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಲಿಖಿತ ಹೇಳಿಕೆ ಮಂಡಿಸಿದರು.

‘ಮೀಸಲಾತಿ ಅವಧಿಯನ್ನು 10 ವರ್ಷಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರಿವಾಜ್ಞೆ ಪ್ರಕಾರ ಮೀಸಲಾತಿ ಮರು ನಿಗದಿಪಡಿಸಬೇಕಾಗಿದೆ. ಈ ಪ್ರಕ್ರಿಯೆಯನ್ನು ಜುಲೈ 25ರೊಳಗೆ ಪೂರ್ಣಗೊಳಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗುವುದು. ಸೆಪ್ಟೆಂಬರ್ 10ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದೆ’ ಎಂದು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು