ಭಾನುವಾರ, ಜನವರಿ 26, 2020
31 °C

ಗ್ರಾ.ಪಂ.ಚುನಾವಣೆ ನಕಲಿ ರಾಜ್ಯಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್‌ 5 ಮತ್ತು 9ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ, ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರೌಢಶಿಕ್ಷಣ ಪಾಸಾಗಿರಬೇಕು, ಆಧಾರ್‌, ಪಾನ್‌ ಕಾರ್ಡ್‌ ಹೊಂದಿರಬೇಕು ಎಂಬ ಮಾಹಿತಿ ಒಳಗೊಂಡ ಗೆಜೆಟ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ನಕಲಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಆಯೋಗವು ಚುನಾವಣಾ ದಿನಾಂಕ ಪ್ರಕಟಿಸಿಲ್ಲ, ಆದೇಶವನ್ನೂ ಹೊರಡಿಸಿಲ್ಲ ಎಂದು ಆಯೋಗದ ಪ್ರಕಟಣೆ ತಿಳಿಸಿದೆ. ಇಂತಹ ನಕಲಿ ಅಧಿಸೂಚನೆಗಳ ಬಗ್ಗೆ ಜನ ಎಚ್ಚರದಿಂದಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಮನವಿ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು