ಶೀಘ್ರವೇ ಸರ್ಕಾರಿ ಶಾಲೆಗಳಲ್ಲಿ ಸಿಎಂ ಗ್ರಾಮ ವಾಸ್ತವ್ಯ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರವೇ ಗ್ರಾಮ ವಾಸ್ತವ್ಯ ಮಾಡುವುದಾಗಿ ಹೇಳಿದ್ದಾರೆ.
’ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ.
ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಲಿದೆ, ಸರ್ಕಾರಿ ಶಾಲೆಗಳಲ್ಲಿ.
— H D Kumaraswamy (@hd_kumaraswamy) June 2, 2019
ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಆರಂಭಿಸಿದ್ದ ಕುಮಾರಸ್ವಾಮಿ ಅವರು, ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಆದ ಬಳಿಕ ಗ್ರಾಮ ವಾಸ್ತವ್ಯ ನಡೆಸಿರಲಿಲ್ಲ. ಮೈತ್ರಿ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಬಳಿಕ ಗ್ರಾಮ ವಾಸ್ತವ್ಯ ನಡೆಸುವುದಾಗಿ ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.