ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತಳೆ ವಲಯಕ್ಕೆ ತಿರುಗಿದ ಹಸಿರು ವಲಯ, ಹಾವೇರಿಯಲ್ಲಿ ಮೊದಲ ಕೋವಿಡ್ -19 ಪ್ರಕರಣ

Last Updated 4 ಮೇ 2020, 8:53 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ 19 ಪ್ರಕರಣ ಸವಣೂರು ತಾಲ್ಲೂಕಿನಲ್ಲಿ ಪತ್ತೆಯಾಗಿದ್ದು, ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ-639 ವ್ಯಕ್ತಿಯು ತನ್ನ ಹಿರಿಯ ಸಹೋದರ ಹಾಗೂ ಸಹೋದರನ ಮಗನೊಂದಿಗೆ ಮುಂಬೈನಿಂದ ಲಾರಿ ಮೂಲಕ ಏಪ್ರಿಲ್ 28ರಂದು ರಾತ್ರಿ 11 ಗಂಟೆಗೆ ಶಿಗ್ಗಾವಿ ತಲುಪಿದ್ದಾರೆ. ಅಲ್ಲಿಂದ ಸವಣೂರಿಗೆ ಬಂದು ನೇರವಾಗಿ ಮನೆಗೆ ತೆರಳಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಏ.29ರಂದು ಮೂವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ ಒಬ್ಬರ ವರದಿ ಮೇ 3ರ ರಾತ್ರಿ ಬಂದಿದ್ದು, 32 ವರ್ಷದ ವ್ಯಕ್ತಿಯಲ್ಲಿ ಕೋವಿಡ್-19 ದೃಢಪಟ್ಟಿದೆ. ಮತ್ತೊಬ್ಬನಲ್ಲಿ ಸೋಂಕು ದೃಢಪಟ್ಟಿದ್ದು, ಮರು ಪರೀಕ್ಷೆ ನಡೆಸಲಾಗುತ್ತಿದೆ. ಸಂಜೆಯ ವೇಳೆಗೆ ಮಾಹಿತಿ ಬರುವ ನಿರೀಕ್ಷೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಸಂಪರ್ಕ ಹೊಂದಿರುವ 21 ಜನರಿಗೂ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದ್ವಿತೀಯ ಸಂಪರ್ಕ ಹೊಂದಿದ ಒಟ್ಟು 14 ಜನರನ್ನು ಗುರುತಿಸಿ, ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT