ಶುಕ್ರವಾರ, ಜುಲೈ 23, 2021
23 °C

‘ಅತಿಥಿ ಉಪನ್ಯಾಸಕರಿಗೆ ಪರಿಹಾರ ಕೊಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೊರೊನಾ ಲಾಕ್‌ಡೌನ್‌ನಿಂದಾಗಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ ಏಪ್ರಿಲ್‌ ಮತ್ತು ಮೇ ತಿಂಗಳ ಗೌರವಧನ ನೀಡಬೇಕು ಹಾಗೂ ವಿಶೇಷ ಆರ್ಥಿಕ ಪರಿಹಾರ ಪ್ಯಾಕೇಜ್‌, ಆಹಾರ ಕಿಟ್‌ ಒದಗಿಸಬೇಕು’ ಎಂದು ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ಡಾ.ಸುಧಾಕರ ಹೊಸಳ್ಳಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಮೈ.ವಿ.ರವಿಶಂಕರ ಅವರು ಈ ಸಂಬಂಧ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ಅತಿಥಿ ಉಪನ್ಯಾಸಕರು ಆನ್‌ಲೈನ್‌ ತರಗತಿ, ಆಂತರಿಕ ಮೌಲ್ಯಮಾಪನ ಸಹಿತ ನಿರ್ದೇಶಿತ ಎಲ್ಲ ಕೆಲಸಗಳನ್ನೂ ಮಾಡುತ್ತ ಬಂದಿದ್ದಾರೆ. ಲಾಕ್‌ಡೌನ್ ಅವಧಿಯಲ್ಲಿ ಅವರಿಗೆ ಅನ್ಯ ಆದಾಯವಿಲ್ಲದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಅವರ ನೆರವಿಗೆ ಬರಲೇಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು