ಬುಧವಾರ, ಅಕ್ಟೋಬರ್ 16, 2019
26 °C

ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ

Published:
Updated:

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಸರ್ಕಾರ ₹18.24 ಕೋಟಿ ಬಿಡುಗಡೆ ಮಾಡಿದೆ.

ಪಿಎಚ್‌.ಡಿ, ಎನ್‌ಇಟಿ, ಎಸ್‌ಎಲ್‌ಇಟಿ ವಿದ್ಯಾರ್ಹತೆ ಹೊಂದಿದವರಿಗೆ ₹13 ಸಾವಿರ ಹಾಗೂ ಸ್ನಾತಕೋತ್ತರ ಪದವಿ ಮೇಲೆ ನೇಮಕಗೊಂಡವರಿಗೆ ₹11 ಸಾವಿರ ಪಾವತಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.

ಇಲಾಖೆಯು ಕೆಲ ಷರತ್ತುಗಳನ್ನು ವಿಧಿಸಿದೆ. ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಗೆ ಮಾತ್ರ ಗೌರವ ಧನ ಪಾವತಿಸಬೇಕು. ಮಾರ್ಗಸೂಚಿ ಅನ್ವಯ, ವಿಭಾಗವನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಿಭಾಗಿಸಿ 8ರಿಂದ 10 ಗಂಟೆಗಳ ಕಾರ್ಯ
ಭಾರ ಹಂಚಿಕೆ ಮಾಡಿರಬೇಕು. ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ 8–10 ಗಂಟೆಗಳ ಕಾರ್ಯಭಾರವನ್ನು ಇಬ್ಬರು ಉಪನ್ಯಾಸಕರಿಗೆ ಹಂಚಿಕೆ ಮಾಡಬಾರದು.

ನಿಯಮ ಮೀರಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ಗೌರವಧನ ಪಾವತಿಸುವಂತಿಲ್ಲ. ಒಂದು ವೇಳೆ ಹೆಚ್ಚು ಸಂಭಾವನೆ ನೀಡಿದರೆ ಅಂತಹ ಕಾಲೇಜು ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರನ್ನೇ ಹೊಣೆ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

Post Comments (+)