ಶುಕ್ರವಾರ, ಫೆಬ್ರವರಿ 28, 2020
19 °C

ಇಸ್ರೊ ಅಧ್ಯಕ್ಷ ಕೆ. ಶಿವನ್‌ಗೆ ಗುರುಬಸವ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಲಿಂಗಾಯತ ಮಹಾಮಠದ ಬಸವ ಸೇವಾ ಪ್ರತಿಷ್ಠಾನ ನೀಡುವ 2020ನೇ ಸಾಲಿನ ‘ಗುರುಬಸವ ಪುರಸ್ಕಾರ’ಕ್ಕೆ ಇಸ್ರೊ ಅಧ್ಯಕ್ಷ ಡಾ.ಕೆ.ಶಿವನ್ ಆಯ್ಕೆಯಾಗಿದ್ದಾರೆ.

ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿಯ ಅವರ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹51 ಸಾವಿರ ನಗದು ಒಳಗೊಂಡಿದೆ ಎಂದು ಲಿಂಗಾಯತ ಮಹಾಮಠದ ಅಕ್ಕಅನ್ನಪೂರ್ಣ ಸೋಮವಾರ ತಿಳಿಸಿದರು.

17ನೇ ವಚನ ವಿಜಯೋತ್ಸವದ ಮೂರನೇ ದಿನ (ಭಾನುವಾರ, ಫೆ.9) ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಪವನಾರದ ಬ್ರಹ್ಮವಿದ್ಯಾ ಮಂದಿರದ ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮ ಹಳ್ಳಿಕೇರಿ ಅವರಿಗೆ ‘ವೀರಮಾತೆ ಅಕ್ಕನಾಗಲಾಂಬಿಕೆ ಪುರಸ್ಕಾರ’, ಬೆಂಗಳೂರಿನ ಆಟೊರಾಜಾಗೆ ‘ಕಾಯಕವೀರ ದಾಸೋಹಿ
ಶರಣ ಪುರಸ್ಕಾರ’ ಮತ್ತು ಮೈಸೂರಿನ ಗಿನ್ನಿಸ್ ದಾಖಲೆ ಯೋಗಾಸನ ಪಟು ಖುಷಿ ಹೇಮಚಂದ್ರ ಅವರಿಗೆ ‘ಚನ್ನಬಸವಣ್ಣ ಪ್ರತಿಭಾ ಪುರಸ್ಕಾರ’ ನೀಡಲಾಗುವುದು. ಮೂರೂ ಪುರಸ್ಕಾರಗಳು ತಲಾ ₹21 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿವೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು