'ಸಿದ್ದರಾಮಯ್ಯ, ಡಿ.ಕೆ.ಶಿ. ಹೇಳಿದರಲ್ಲಿ ತಪ್ಪಿಲ್ಲ’: ಎಚ್‌. ಆಂಜನೇಯ ಸಮರ್ಥನೆ

ಸೋಮವಾರ, ಮೇ 20, 2019
30 °C

'ಸಿದ್ದರಾಮಯ್ಯ, ಡಿ.ಕೆ.ಶಿ. ಹೇಳಿದರಲ್ಲಿ ತಪ್ಪಿಲ್ಲ’: ಎಚ್‌. ಆಂಜನೇಯ ಸಮರ್ಥನೆ

Published:
Updated:

ಹೊಸಪೇಟೆ: ‘ಶಾಸಕ ಸಿದ್ದರಾಮಯ್ಯ, ಸಚಿವ ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಮಾಜಿ ಶಾಸಕ ಎಚ್‌. ಆಂಜನೇಯ ಸಮರ್ಥಿಸಿಕೊಂಡಿದ್ದಾರೆ.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾನು ಮತ್ತೆ ಸಿ.ಎಂ. ಆದರೆ ಹತ್ತು ಕೆ.ಜಿ. ಅಕ್ಕಿ ಕೊಡುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾದರೆ ಬಿ.ಎಸ್‌.ಯಡಿಯೂರಪ್ಪನವರ ಡೈರಿ ವಿಷಯ ಬಹಿರಂಗಪಡಿಸುವೆ ಎಂದು ಶಿವಕುಮಾರ ಹೇಳಿದ್ದಾರೆ. ಇದರಲ್ಲಿ ತಪ್ಪೇನೂ ಇಲ್ಲ’ ಎಂದರು.

‘ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿದೆ ಎನ್ನುವುದಕ್ಕೆ ಸಿ.ಎಂ. ಸ್ಥಾನದ ಆಕಾಂಕ್ಷಿ ಎಂದು ಇಬ್ಬರು ಮುಖಂಡರು ನೀಡಿರುವ ಹೇಳಿಕೆಯೇ ಸಾಕ್ಷಿ. ಬಿಜೆಪಿ ಮುಖಂಡರಾದ ಜಗದೀಶ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಆರ್‌. ಅಶೋಕ್‌, ಗೋವಿಂದ ಕಾರಜೋಳ ಈ ಧೈರ್ಯ ತೋರಿಸುವರೇ. ಅದು ಸಾಧ್ಯವಿಲ್ಲ. ಏಕೆಂದರೆ ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ’ ಎಂದು ಹೇಳಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 15

    Happy
  • 0

    Amused
  • 0

    Sad
  • 1

    Frustrated
  • 9

    Angry

Comments:

0 comments

Write the first review for this !