ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ಏಟು ನೀಡಿದ ‘ಮೈತ್ರಿ’: ಮಾಜಿ ಸಚಿವ ಎಚ್‌.ಆಂಜನೇಯ ವಿಶ್ಲೇಷಣೆ

Last Updated 24 ಮೇ 2019, 7:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಅಧಿಕಾರದ ಹಂತದಲ್ಲಿದ್ದ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಯನ್ನು ಚುನಾವಣೆಗೂ ವಿಸ್ತರಿಸಿದ್ದರಿಂದ ನಷ್ಟವುಂಟಾಗಿದೆ. ‘ಮೈತ್ರಿ’ಯ ಫಲ ಮಿತ್ರ ಪಕ್ಷಗಳ ಬದಲು ಬಿಜೆಪಿಗೆ ಸಿಕ್ಕಿದೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ವಿಶ್ಲೇಷಣೆ ಮಾಡಿದರು.

‘ಮತ ಹಂಚಿಕೆಯ ಪ್ರಮಾಣವನ್ನು ಗಮನಿಸಿ ಚುನಾವಣಾ ಪೂರ್ವ ಮೈತ್ರಿಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಲೆಕ್ಕಾಚಾರ ಉಲ್ಟಾ ಆಗಿದೆ. ‘ಮೈತ್ರಿ’ ಅಭ್ಯರ್ಥಿಗಳಿಗೆ ಮಿತ್ರ ಪಕ್ಷಗಳ ಕಾರ್ಯಕರ್ತರೇ ಮತ ಹಾಕಿಲ್ಲ. ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ 16 ಕ್ಷೇತ್ರಗಳಲ್ಲಿ ಗೆಲ್ಲುತ್ತಿದ್ದವು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮಂಡ್ಯ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರೆ ಮುಖಭಂಗ ಆಗುತ್ತಿರಲಿಲ್ಲ. ತ್ರಿಕೋನ ಸ್ಪರ್ಧೆ ಏರ್ಪಟಿದ್ದರೆ ಮಿತ್ರ ಪಕ್ಷಗಳ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಿದ್ದರು. ಮೈತ್ರಿಯಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ನಷ್ಟವುಂಟಾಗಿದ್ದು, ಗಂಭೀರವಾಗಿ ಆಲೋಚಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT