ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲಾತಿ; ಜಂತರ್‌ಮಂತರ್‌ನಲ್ಲಿ ಧರಣಿ

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿಕೆ
Last Updated 8 ಮಾರ್ಚ್ 2020, 15:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡುವ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ನೀಡುವಂತೆ ಆಗ್ರಹಿಸಿ ಶೀಘ್ರದಲ್ಲೇ ನವದೆಹಲಿಯ ಜಂತರ್‌ಮಂತರ್‌ನಲ್ಲಿ ರಾಜ್ಯದ ಐದು ಸಾವಿರ ಮಹಿಳೆಯರೊಂದಿಗೆ ಧರಣಿ ಕೂರುತ್ತೇನೆ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ಬೆಳಗಾವಿ ವಿಭಾಗಮಟ್ಟದ ಜೆಡಿಎಸ್‌ ಕಾರ್ಯಕರ್ತರ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಹುಬ್ಬಳ್ಳಿ ಮತ್ತು ಬೆಂಗಳೂರಿನಿಂದ ಒಟ್ಟು ಎರಡು ರೈಲುಗಳ ಮೂಲಕ ಮಹಿಳೆಯರನ್ನು ನವದೆಹಲಿಗೆ ಕರೆದುಕೊಂಡು ಹೋಗುತ್ತೇನೆ’ ಎಂದರು.

‘ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಈಗಾಗಲೇ ಅಂಗೀಕಾರವಾಗಿದೆ. ಆದರೆ, ಲೋಕಸಭೆಯಲ್ಲಿ ಆರು ವರ್ಷಗಳಿಂದ ಈ ಮಸೂದೆ ಅಂಗೀಕಾರವಾಗದೇ ತಾತ್ಸಾರಕ್ಕೆ ಒಳಗಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ಮಹಿಳಾ ಮೀಸಲಾತಿ ಹೋರಾಟಕ್ಕೆ ಒಡಿಸ್ಸಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸೇರಿದಂತೆ ರಾಷ್ಟ್ರದ ವಿವಿಧ ಪಕ್ಷಗಳು ಬೆಂಬಲ ನೀಡುವುದಾಗಿ ತಿಳಿಸಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT