ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹುಟ್ಟುಹಬ್ಬ: ಶುಭಕೋರಿದ ಮೋದಿ, ಎಚ್‌ಡಿಕೆ

Last Updated 18 ಮೇ 2020, 6:03 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮೇ 18 ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ದೇವೇಗೌಡ ಅವರೀಗ 87ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಪುತ್ರ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಟ ಟ್ವೀಟ್ ಮಾಡಿದ್ದು, ‘ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಸ್ಸು ಮತ್ತು ಆರೋಗ್ಯ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ ತಮ್ಮ ತಂದೆಗೆ ಶುಭ ಕೋರಿದ್ದಾರೆ.

ಎಚ್.‌ಡಿ ದೇವೇಗೌಡ ಅವರ ಪೂರ್ಣ ಹೆಸರು ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ. ದೇವೇಗೌಡರು ಮೇ 18ರ 1933ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪದವೀಧರರಾಗಿರುವ ಇವರು, ಭಾರತದ 12ನೇ ಪ್ರಧಾನ ಮಂತ್ರಿಯಾಗಿದ್ದವರು. ದೇವೇಗೌಡರು ಮೇ 30ರ 1997ರಂದು ದೇಶದ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಹ ದೇವೇಗೌಡರಿಗೆ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT