ಗುರುವಾರ , ಏಪ್ರಿಲ್ 9, 2020
19 °C

ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ಸ್ಥಗಿತ: ಕುಮಾರಸ್ವಾಮಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಶಾದಿ ಭಾಗ್ಯ ಮಾತ್ರವಲ್ಲ; ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ’ ಎಂದು ಜೆಡಿಎಸ್‌ ಶಾಸಕಾಂಗ ಪ‍ಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಭಾನುವಾರ ಇಲ್ಲಿ ತಿಳಿಸಿದರು.

ತಮ್ಮ ಕ್ಷೇತ್ರಕ್ಕೆ ಅನುದಾನ ಬಂದಿಲ್ಲವೆಂದು ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ಗಲಾಟೆ ಮಾಡಿದ್ದಾರೆ. ಅದು ಸಹ ಮಂತ್ರಿಯನ್ನು ಕೂರಿಸಿಕೊಂಡು ಅನುದಾನ ಕೊಡಿ ಎಂದು ಆಗ್ರಹಿಸಿದ್ದಾರೆ ಎಂದು ಹೇಳಿದರು.

‘ದಾಖಲಾತಿ ಕೊಟ್ಟು 24 ಗಂಟೆಗಳಲ್ಲಿ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಸಾಲಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ. ನಾನು ಅಧಿಕಾರದಿಂದ ಕೆಳಗಿಳಿಯುವಾಗ ಬರೀ ಘೋಷಣೆ ಮಾಡಿಲ್ಲ. ಬದಲಿಗೆ ₹ 25 ಸಾವಿರ ಕೋಟಿ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ. ಅದರಲ್ಲಿ ₹ 800 ಕೋಟಿಯನ್ನು ಇನ್ನೂ ಬಿಡುಗಡೆ ಮಾಡದೆ ಇಟ್ಟುಕೊಂಡಿದ್ದಾರೆ. ನಾವು ರೈತರಿಂದ ಸರಳ ದಾಖಲೆ ಕೇಳಿದ್ದೆವು. ರೈತರ ದಾಖಲೆ ತಪ್ಪಿದ್ದರೆ ಸರಿಪಡಿಸುವುದು ಇಲಾಖೆಯ ಕೆಲಸ. ಅದನ್ನು ಬಿಟ್ಟು ಕೃಷಿ ಸಚಿವರು ನಾಲಿಗೆ ಇದೆ ಎಂದು ತೆವಲಿಗೆ ಸುಳ್ಳು ಹೇಳಿಕೊಂಡು ಓಡಾಡುವುದು ಬೇಡ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು