ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ನೀವು ಭಾರತದ ಪ್ರಧಾನಿಯೋ? ಪಾಕ್‌ ಪ್ರಧಾನಿಯೋ?: ಕುಮಾರಸ್ವಾಮಿ ಟಾಂಗ್

Last Updated 3 ಜನವರಿ 2020, 8:20 IST
ಅಕ್ಷರ ಗಾತ್ರ

ಬೆಂಗಳೂರು:‘ಸಿಎಎ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ?’ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟಾಂಗ್‌ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ‘ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ? ಭಾರತದ ಪ್ರಜೆಗಳು ವೋಟು ಕೊಟ್ಟರೋ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ’ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

‘ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ’ ಎಂದು ಟೀಕಾಪ್ರಹಾರ ಮಾಡಿದ್ದಾರೆ.

‘25 ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ ₹35 ಸಾವಿರ ಕೋಟಿ ನಷ್ಟವಾದರೂ ಕೇಂದ್ರ ಕೊಟ್ಟಿದ್ದು ಚಿಕ್ಕಾಸು. ನರೇಗಾ ಬಾಕಿ ಕೊಟ್ಟಿಲ್ಲ. ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ. ಬರ ಪರಿಹಾರವಿಲ್ಲ. ಇವುಗಳ ಬಗ್ಗೆ ಮಾತನಾಡಲಾಗದ ನೀವು ಮಾತಾಡುವುದು ಪಾಕಿಸ್ತಾನದ ಬಗ್ಗೆ. ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ’ ಎಂದು ತಾಕೀತು ಮಾಡಿದರು.

‘ಕೇಂದ್ರ ಕಟ್ಟಿಸಿಕೊಂಡ ತೆರಿಗೆಯ ಕರ್ನಾಟಕದ ಪಾಲನ್ನು ಹಾಗೂ ನೆರೆ ಪರಿಹಾರದ ಹಣವನ್ನು ಯಡಿಯೂರಪ್ಪ ಪಾಕಿಸ್ತಾನವನ್ನು ಕೇಳಬೇಕೋ ಅಥವಾ ಭಾರತೀಯ ಮತದಾರರಿಂದ ಆಯ್ಕೆಯಾದ ನಿಮ್ಮನ್ನು ಕೇಳಬೇಕೋ? ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿರಾ? ಇಲ್ಲ... ಅದನ್ನು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನು ಸಾಬೀತು ಮಾಡುತ್ತದೆ’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT