ಭಾನುವಾರ, ಜೂಲೈ 5, 2020
28 °C

ಪಿಯುಸಿ ಉಪನ್ಯಾಸಕರಿಗೆ ಧಮ್ಕಿ ಹಾಕಿಸುವುದನ್ನು ಸರ್ಕಾರ ನಿಲ್ಲಿಸಲಿ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಪಿಯುಸಿ ಪರೀಕ್ಷೆ ಮುಗಿಯಲು ಜೂನ್ 18ರವರೆಗೆ ಕಾಲಾವಕಾಶ ಇದೆ. ಸರ್ಕಾರ ''ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಪ್ರಯೋಗ ಮಾಡಲು ಮುಂದಾಗಿರುವುದನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸುತ್ತೇನೆ ಎಂದು ವಿಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರನ್ನು ನಿಯೋಜಿಸುವ ಮೊದಲು ವಿಕೇಂದ್ರೀಕರಣ ವ್ಯವಸ್ಥೆಯಾಗಬೇಕು. ಮೌಲ್ಯಮಾಪನಕ್ಕೆ ಬರದಿದ್ದರೆ ವೇತನ ರಹಿತ ರಜೆ ಎಂದು ಡಿಡಿಪಿಐಗಳು, ಜಿಲ್ಲಾಧಿಕಾರಿಗಳಿಂದ 'ಧಮ್ಕಿ' ಹಾಕಿಸುತ್ತಿರುವುದು ಸರ್ಕಾರದ ಅವಿವೇಕದ ಕ್ರಮ ಎಂದು ಕಿಡಿಕಾರಿದ್ದಾರೆ.

ಸೂಕ್ತ ವಸತಿ, ಸಾರಿಗೆ ಮತ್ತು ಹೋಟೆಲ್ ಸೌಲಭ್ಯ ಇಲ್ಲದಿರುವಾಗ ಹೊರ ಜಿಲ್ಲೆಗಳಿಗೆ ಹೋಗಿ ಉಪನ್ಯಾಸಕರು ಮೌಲ್ಯಮಾಪನ ಮಾಡುವುದು ಬಲುಕಷ್ಟ. ಯಾವುದೇ ಕನಿಷ್ಠ ಸೌಲಭ್ಯಗಳನ್ನು ಒದಗಿಸದೆ ಮೌಲ್ಯಮಾಪನಕ್ಕೆ ಒತ್ತಡ ತಂತ್ರ ಅನುಸರಿಸುತ್ತಿರುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದೂ ಅವರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರ ಮೇಲೆ ರಾಜ್ಯ ಸರ್ಕಾರ ಒತ್ತಡ ತಂತ್ರ ಹೇರುತ್ತಿರುವುದು ಖಂಡನೀಯ. ಕೊರೊನಾ ಸೋಂಕು ಸಮುದಾಯಕ್ಕೆ ವ್ಯಾಪಿಸುವ ಭೀತಿಯಲ್ಲಿರುವಾಗ ಬೆದರಿಕೆಯ ಅಸ್ತ್ರ ಬಳಸುವ ಮೂಲಕ ಉಪನ್ಯಾಸಕರ ಜೀವದೊಂದಿಗೆ ಸರ್ಕಾರ  ಚೆಲ್ಲಾಟವಾಡುತ್ತಿದೆ ಎಂದು ದೂರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು