ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ, ಸರ್ಕಾರದ ಆತುರದ ಕ್ರಮ: ಎಚ್‌ಡಿಕೆ

Last Updated 22 ಮೇ 2020, 9:29 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಮೂಲಕ ಮೇ 30ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಆತುರದ ಕ್ರಮವಾಗಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ತರಗತಿ ಪಠ್ಯ ಆಲಿಸುವುದು ಕಷ್ಟ. ಪ್ರತೀ ವಿದ್ಯಾರ್ಥಿಯೂ ಕೂಡ ಆನ್‌ಲೈನ್ ಮುಖಾಂತರ ಪರಿಪೂರ್ಣವಾಗಿ ಕಲಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಹುತೇಕ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳು ಆನ್‌ಲೈನ್ ತರಗತಿ ಆರಂಭಿಸಿವೆ. ಇದರಿಂದ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೊರೊನಾ ಸಂಕಷ್ಟ ಸಮಯದಲ್ಲಿ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಆಗ್ರಹಿಸುತ್ತೇನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT