ಹಾಸನ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಬೇಕು: ರೇವಣ್ಣ

7

ಹಾಸನ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಬೇಕು: ರೇವಣ್ಣ

Published:
Updated:
Deccan Herald

ಹಾಸನ: ‘ಸಚಿವ ಸಂಪುಟ ವಿಸ್ತರಣೆಯಲ್ಲಿ ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಿದರೆ ಒಳ್ಳೆಯದು. ಜಿಲ್ಲೆಯಿಂದ ಇಬ್ಬರು ಸಚಿವರಾದರೆ ಅಭಿವೃದ್ಧಿ ಕೆಲಸಗಳ ವೇಗ ಮತ್ತಷ್ಟು ಹೆಚ್ಚುತ್ತದೆ’ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಇಲ್ಲಿ ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಮ ಮಂದಿರ, ಟಿಪ್ಪು ಜಯಂತಿ ಮತ್ತಿತರ ವಿಷಯಗಳಿಗೆ ಪ್ರಾಧಾನ್ಯ ನೀಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವುದೇ ಬಿಜೆಪಿ ಕೆಲಸವಾಗಿದೆ. ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಮಡಿಕೇರಿಯಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ. ಭೀಕರ ಮಳೆಯಾಗಿ ಕೊಡಗು ಜನ ತತ್ತರಿಸಿದ ಸಂದರ್ಭದಲ್ಲಿ ಕೇಂದ್ರದಿಂದ ಒಂದು ರೂಪಾಯಿ ಪರಿಹಾರವನ್ನೂ ತರದ ಬಿಜೆಪಿಯವರು ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡುತ್ತಾರೆ. ರಾಜಕೀಯ ಲಾಭಕ್ಕೆ ಅವರು ಏನು ಬೇಕಾದರೂ ಮಾಡುತ್ತಾರೆ’ ಎಂದು ಅವರು ಕಿಡಿ ಕಾರಿದರು.

‘ಕರ್ನಾಟಕದಲ್ಲಿರುವ ದೇವಸ್ಥಾನಗಳಿಗೆ ದುಡ್ಡು ಕೊಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಇನ್ನು ಉತ್ತರ ಪ್ರದೇಶದ ಅಯೋಧ್ಯೆಗೆ ಹಣ ನೀಡುವುದು ಹೇಗೆ ಸಾಧ್ಯ‌? ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಇಂಥ ವಿಷಯಗಳನ್ನು ಮುನ್ನೆಲೆಗೆ ತರುತ್ತಾರೆ’ ಎಂದು ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !