5

ಎಚ್‌.ಕೆ. ಪಾಟೀಲಗೆ ಕೆಪಿಸಿಸಿ ಸಾರಥ್ಯ?

Published:
Updated:

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಎಚ್‌.ಕೆ. ಪಾಟೀಲ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಸಾರಥ್ಯ ವಹಿಸಿಕೊಳ್ಳುವ ನಿರೀಕ್ಷೆ ಇದೆ.

ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಪಾಟೀಲ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಶೀಘ್ರದಲ್ಲಿಯೇ ಎಚ್‌.ಕೆ ಪಾಟೀಲ ಅವರು ಜಿ. ಪರಮೇಶ್ವರ್‌ ಅವರಿಂದ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ
ಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಹಿರಿಯ ಮುಖಂಡ ಟಿ.ಬಿ. ಜಯಚಂದ್ರ, ಸಂಸದ ಕೆ.ಎಚ್. ಮುನಿಯಪ್ಪ, ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌ ಮತ್ತು ಸಚಿವ ಡಿ.ಕೆ. ಶಿವಕುಮಾರ್‌ ಕೂಡ ಈ ಹುದ್ದೆಯ
ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !