ಸೋಮವಾರ, ಸೆಪ್ಟೆಂಬರ್ 21, 2020
26 °C
‘ಒಕ್ಕಲಿಗರನ್ನು ಗುರಿಯಾಗಿಸಿಕೊಂಡು ಪ್ರಧಾನಿ ಕೆಲಸ’: ಆರೋಪ

ಮೋದಿ ಎಲ್ಲಿ ಸರ್ವಾಧಿಕಾರಿಯಾಗ್ತಾರೋ ಗೊತ್ತಿಲ್ಲ: ದೊರೆಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ. ಒಕ್ಕಲಿಗರನ್ನು ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ‘ಸಿದ್ದರಾಮಯ್ಯ ಆಡಳಿತ ಅಂತರಂಗ ಬಹಿರಂಗ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅತಿ ಬಹುಮತದ ಕಾರಣ, ಮೋದಿ ಎಲ್ಲಿ ಸರ್ವಾಧಿಕಾರಿ ಆಗಿಬಿಡುತ್ತಾರೋ ಗೊತ್ತಿಲ್ಲ’ ಎಂದರು.

‘ಒಕ್ಕಲಿಗರು ಶಾಸಕ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ಮಾಡುವುದಕ್ಕಿಂತ ಪ್ರಜಾಪ್ರಭುತ್ವ ಉಳಿಸಲು ಹೋರಾಡಿದ್ದರೆ ಸೂಕ್ತವಾಗಿತ್ತು’ ಎಂದು ಅವರು ಅಭಿಪ್ರಾಯಪಟ್ಟರು. 

‘ದುಡ್ಡು, ಜಾತಿ ನೋಡಿ ಅಯೋಗ್ಯರಿಗೆ ಟಿಕೆಟ್ ಕೊಟ್ಟಿದ್ದೀರಿ. ಅವರು ಆಶ್ರಯಕ್ಕಾಗಿ ಬೇರೆಯವರ ಕಾಲು ಹಿಡಿಯಲು ಹೋಗಿದ್ದಾರೆ. ಅಂಥವರನ್ನು ಅನರ್ಹಗೊಳಿಸುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಗಂಡಸುತನದ ಕೆಲಸ ಮಾಡಿದ್ದಾರೆ’ ಎಂದು ದೊರೆಸ್ವಾಮಿ ಹೇಳಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು