ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಸಿದ್ದರಾಮಯ್ಯ ಅಣ್ಣ ತಮ್ಮ ಇದ್ದಂತೆ: ಎಚ್‌.ವಿಶ್ವನಾಥ್‌

Last Updated 11 ಡಿಸೆಂಬರ್ 2019, 20:30 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಮತ್ತು ಸಿದ್ದರಾಮಯ್ಯ ಅಣ್ಣ– ತಮ್ಮ ಇದ್ದಂತೆ. ಯಾವತ್ತೂ ಅಣ್ಣನನ್ನು ಬೆಳೆಯಲು ತಮ್ಮ ಬಿಡುವುದಿಲ್ಲ’ ಎಂದು ಬಿಜೆಪಿ ನಾಯಕ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

‘ನಾವಿಬ್ಬರೂ ಕುರುಬ ಸಮಾಜಕ್ಕೆ ಸೇರಿದವರು. ಸಿದ್ದರಾಮಯ್ಯ ಜತೆ ದಾಯಾದಿ ಕಲಹವಿದ್ದರೆ ತೊಂದರೆ ಇರುತ್ತಿರಲಿಲ್ಲ. ಆದರೆ, ಇದು ಅಣ್ಣ ತಮ್ಮನ ಕಿತ್ತಾಟ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ಉಪ ಚುನಾವಣೆಯಲ್ಲಿ ಸೋತಿರಬಹುದು. ಆದರೆ, ನಮ್ಮ ಉದ್ದೇಶ ಗೆದ್ದಿದೆ. ನಮಗೆ ಸಚಿವ ಸ್ಥಾನದ ಮೇಲೆ ಕಣ್ಣಿಲ್ಲ’ ಎಂದು ಹೇಳಿದ ಅವರು ‘ಬಿ.ಎಸ್‌.ಯಡಿಯೂರಪ್ಪ ಅವರೇ ನಮ್ಮ ಹೈಕಮಾಂಡ್‌’ ಎಂದು ಹೇಳಿದರು.

‘ನಾನು ಮೂರು ವರ್ಷದಲ್ಲಿ ಮೂರು ಪಕ್ಷ ಬದಲಿಸಿದೆ ಎನ್ನುತ್ತಾರೆ. ಆದರೆ, 40 ವರ್ಷ ಕಾಂಗ್ರೆಸ್‌ನಲ್ಲಿ ಸಕ್ರಿಯನಾಗಿದ್ದೆ. ಅಯೋಗ್ಯ ಸರ್ಕಾರವನ್ನು ಕಿತ್ತೊಗೆಯಲು ಬಲವಾದ ಕಾರಣವಿತ್ತು. ಆದ್ದರಿಂದ ಪಕ್ಷವನ್ನು ಬದಲಿಸಿದೆ. ಸಿದ್ದರಾಮಯ್ಯ ಆರು ಬಾರಿ ಮತ್ತು ರಮೇಶ್ ಕುಮಾರ್‌ ಒಂಬತ್ತು ಬಾರಿ ಪಕ್ಷಾಂತರ ಮಾಡಿದ್ದಾರೆ’ ಎಂದು ಕುಟುಕಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ ವಿಶ್ವನಾಥ್‌, ‘ಕಾಂಗ್ರೆಸ್‌ ಪಕ್ಷವನ್ನು ಮುಳುಗಿಸುವವರು ಮುಳುಗುವ ಮುನ್ನ ನಾಯಕತ್ವ ಬಿಟ್ಟು ಹೊರ ಹೋಗಿದ್ದು ಕಾಂಗ್ರೆಸ್‌ನ ಭಾಗ್ಯ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಬಗ್ಗೆ ಗೌರವವಿದೆ. ಆದರೆ, ಆ ಪಕ್ಷದ ನಾಯಕತ್ವದ ಬಗ್ಗೆ ನನಗೆ ಬೇಸರವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT