ಸೋಮವಾರ, ಜೂನ್ 14, 2021
26 °C
’ಸಚಿವ ಸ್ಥಾನ ಕೊಟ್ಟರೆ ಬೇಡ ಎನ್ನುವುದಿಲ್ಲ’

ಬಿಜೆಪಿ ಸೇರುವುದಿಲ್ಲ:ಜೆಡಿಎಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಶ್ವನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ ಸೇರುವ ಪ್ರಶ್ನೆ ಇಲ್ಲ. ಸಚಿವ ಸ್ಥಾನ ಕೊಟ್ಟರೆ ಬೇಡ ಎನ್ನುವುದಿಲ್ಲ ಎಂದು ಶಾಸಕ ಎ.ಎಚ್.ವಿಶ್ವನಾಥ್ ಹೇಳಿದರು.

ಮಂಗಳವಾರ ಇಲ್ಲಿನ ಪ್ರೆಸ್ ಕ್ಲಬ್ ನಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ ಬಳಿಕ ಅವರು ಪತ್ರಕರ್ತರಿಗೆ ಈ ವಿಷಯ ತಿಳಿಸಿದರು‌.

* ಇದನ್ನೂ ಓದಿ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ

'ನಾನು ಮಂತ್ತಿಸ್ಥಾನ ಪಡೆಯಬೇಕೆಂದು ಈಗ ರಾಜೀನಾಮೆ ಕೊಟ್ಟಿಲ್ಲ. ಮಂತ್ರಿ ಮಾಡಬೇಕೆಂದು ಯಾರ ಬಳಿಯೂ ಅಂಗಲಾಚುವುದಿಲ್ಲ. ಯಾರಿಗೆ ಅವಸರ ಇದೆಯೋ ಅವರು ಮಂತ್ರಿಯಾಗಲಿ ಎಂದರು.

ಸಮನ್ವಯ ಸಮಿತಿಯ ಅಧ್ಯಕ್ಷರ ಜತೆಗೆ ಜೆಡಿಎಸ್ ವರಿಷ್ಠರೂ ನಿಮ್ಮನ್ನು ಕಡೆಗಣಿಸಿದ್ದರಲ್ಲಾ ಎಂದಾಗ ಹೌದು ಎಂಬುದನ್ನು ಸೂಚ್ಯವಾಗಿ ತಿಳಿಸಿದರು.

ರಾಜೀನಾಮೆ: ಸಭೆಯಲ್ಲಿ ನಿರ್ಧಾರ
ಮೈಸೂರು: 
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ರಾಜೀನಾಮೆ ಪ್ರಕಟಿಸಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತಂತೆ ಮಂಗಳವಾರ ಸಂಜೆ ನಡೆಯಲಿರುವ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

ರಾಜೀನಾಮೆ ನೀಡುವ ಕುರಿತಂತೆ ವಿಶ್ವನಾಥ್ ನನ್ನ ಜತೆ ಚರ್ಚಿಸಿಲ್ಲ. ಸಂಜೆ ಸಭೆಯಲ್ಲಿ ಅಂತಿಮ ನಿರ್ಣಯ ಹೊರಬೀಳಲಿದೆ ಎಂದಷ್ಟೇ ಪ್ರತಿಕ್ರಿಯಿಸಿದರು.

ವಿಡಿಯೊ ನೋಡಿ: ಜೆಡಿಎಸ್‌ ರಾಜ್ಯ ಘಟಕದ ಅಧ‌್ಯಕ್ಷ ಎಚ್‌.ವಿಶ್ವನಾಥ್‌ ಸಂದರ್ಶ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು