‘ಜೆಡಿಎಸ್‌ ರಾಜ್ಯ ಅಧ್ಯಕ್ಷ ಸ್ಥಾನ: ನಿಖಿಲ್‌ ಸಹ ಸಮರ್ಥ ಅಭ್ಯರ್ಥಿ’

ಬುಧವಾರ, ಜೂನ್ 26, 2019
23 °C

‘ಜೆಡಿಎಸ್‌ ರಾಜ್ಯ ಅಧ್ಯಕ್ಷ ಸ್ಥಾನ: ನಿಖಿಲ್‌ ಸಹ ಸಮರ್ಥ ಅಭ್ಯರ್ಥಿ’

Published:
Updated:

ಮಡಿಕೇರಿ: ‘ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ. ಮಧು ಬಂಗಾರಪ್ಪ, ವಿ.ಎಸ್‌.ವಿ.ದತ್ತ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಆ ಜವಾಬ್ದಾರಿ ವಹಿಸಿದರೆ ನಿಭಾಯಿಸುವ ಶಕ್ತಿ ಹಾಗೂ ಪಕ್ಷ ಸಂಘಟಿಸುವ ಸಾಮರ್ಥ್ಯವಿದೆ’ ಎಂದು ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಅಡಗೂರು ಎಚ್.ವಿಶ್ವನಾಥ್‌ ಬುಧವಾರ ಇಲ್ಲಿ ಹೇಳಿದರು.

‘ನನ್ನ ರಾಜೀನಾಮೆ ಅಂಗೀಕಾರವಾಗಿದೆ. ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ವಾಪಸ್‌ ಪಡೆಯುವಂತೆ ಮನವೊಲಿಸಿದರು. ನಾನು, ನನ್ನ ರಾಜೀನಾಮೆಯನ್ನೇ ಅಂಗೀಕರಿಸುವಂತೆ ಅವರ ಮನವೊಲಿಸಿದೆ.

‘ಸಮ್ಮಿಶ್ರ’ ಸರ್ಕಾರದ ಮೇಲೆ ನನಗೆ ಪ್ರೀತಿ, ವಿಶ್ವಾಸ, ಅಭಿಮಾನವಿದೆ. ಇನ್ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹಾಗೂ ಕ್ಷೇತ್ರದ ಶಾಸಕನಾಗಿ ಕೆಲಸ ಮಾಡುತ್ತೇನೆ’ ಎಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ರಾಜ್ಯದ ರಾಜಕಾರಣ ಕಲುಷಿತವಾಗಿದೆ. ಅದನ್ನು ಶುದ್ಧೀಕರಿಸಬೇಕು. ಸಮಾನ ಮನಸ್ಕರು ಒಂದೆಡೆ ಸೇರಿ ಚರ್ಚಿಸುವ ಅಗತ್ಯವಿದೆ. ಹೋರಾಟ, ಚಳವಳಿ ಆಗಬೇಕು. ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರೂ ಆ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ' ಎಂದು ವಿಶ್ವನಾಥ್‌ ಅವರು ಸೂಚ್ಯವಾಗಿ ಪ್ರತಿಪಾದಿಸಿದರು.

‘ನಮ್ಮದು ಜಾತ್ಯತೀತ ಹಿನ್ನೆಲೆಯುಳ್ಳ ಪಕ್ಷ. ಅದಕ್ಕೆ ಅರ್ಥ ಬರಬೇಕಾದರೆ ಸಚಿವ ಸಂಪುಟದಲ್ಲಿ ದಲಿತರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಸ್ಥಾನ ಕಲ್ಪಿಸಬೇಕು. ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಕೇಂದ್ರದಲ್ಲೂ ಮೋದಿ ಅವರೂ ಅಲ್ಪಸಂಖ್ಯಾತರಿಗೆ ಸ್ಥಾನ ನೀಡಿದ್ದಾರೆ. ಆದ್ದರಿಂದ, ನಮ್ಮ ಪಾಲಿನ ಎರಡು ಸ್ಥಾನಗಳನ್ನು ದಲಿತ ಹಾಗೂ ಅಲ್ಪಸಂಖ್ಯಾತರಿಗೆ ನೀಡಬೇಕು. ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಅವರಿಗೆ ಅವಕಾಶ ಸಿಗುವ ವಿಶ್ವಾಸವಿದೆ’ ಎಂದು ಪುನರುಚ್ಚರಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 10

  Happy
 • 3

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !