ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌1 ಎನ್‌1: ಒಂದೇ ದಿನದಲ್ಲಿ 30 ಪ್ರಕರಣ ಪತ್ತೆ

Last Updated 25 ಅಕ್ಟೋಬರ್ 2018, 20:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಎಚ್‌1 ಎನ್‌1 ಜ್ವರ ಉಲ್ಬಣಿಸುತ್ತಿದ್ದು, ಗುರುವಾರ ಒಂದೇ ದಿನ ಒಟ್ಟು 30 ಪ್ರಕರಣಗಳು ಪತ್ತೆಯಾಗಿವೆ.

ಬಿಬಿಎಂಪಿ ವ್ಯಾಪ್ತಿ ಹಾಗೂ ಹಾಸನದಲ್ಲಿ ತಲಾ 6, ಕೋಲಾರದಲ್ಲಿ 3, ಬೆಂಗಳೂರು ನಗರ ಜಿಲ್ಲೆ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ದಕ್ಷಿಣ ಕನ್ನಡದಲ್ಲಿ ತಲಾ ಇಬ್ಬರಿಗೆ ಈ ಜ್ವರ ಬಂದಿರುವುದು ದೃಢಪಟ್ಟಿದೆ.

ಚಿತ್ರದುರ್ಗ, ತುಮಕೂರು, ರಾಮನಗರ, ಬಳ್ಳಾರಿ, ಉಡುಪಿಯ ತಲಾ ಒಬ್ಬರು ಈ ಕಾಯಿಲೆಯಿಂದ ಬಾಧಿತರಾಗಿದ್ದಾರೆ. 2018ರ ಜನವರಿಯಿಂದ ಈವರೆಗೆ ರಾಜ್ಯದಲ್ಲಿ 770 ಪ್ರಕರಣಗಳು ಪತ್ತೆಯಾಗಿದ್ದು, 12 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT