ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ತಿಂಗಳಲ್ಲಿ 461 ಎಚ್‌1ಎನ್‌1 ಪ್ರಕರಣ

Last Updated 3 ಏಪ್ರಿಲ್ 2020, 19:21 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿನ ಭೀತಿ ನಡುವೆಯೇ ಎಚ್‌1ಎನ್‌1 ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಮೂರು ತಿಂಗಳಲ್ಲಿ 461 ಮಂದಿ ಈ ಜ್ವರದಿಂದ ಬಳಲಿದ್ದಾರೆ.

ಕಳೆದ ವರ್ಷ ಈ ಸೋಂಕಿನಿಂದ2 ಸಾವಿರಕ್ಕೂ ಅಧಿಕ ಮಂದಿ ಬಳಲಿದ್ದು, ಐದು ವರ್ಷಗಳಲ್ಲಿ ಅತೀ ಹೆಚ್ಚು ಸಾವು ವರದಿಯಾಗಿತ್ತು. ಚಿಕಿತ್ಸೆ ಫಲಿಸದೆ 96 ಮಂದಿ ಮೃತಪಟ್ಟಿದ್ದರು. 2010ರಲ್ಲಿ 120 ಮಂದಿ ಈ ಜ್ವರದಿಂದಾಗಿ ಮೃತಪಟ್ಟಿದ್ದರು.

ಈಗ ಪುನಃ ಸೋಂಕು ಹರಡಲು ಆರಂಭಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಯಲ್ಲಿಯೇ184 ಪ್ರಕರಣಗಳು ಬೆಳಕಿಗೆ ಬಂದಿವೆ.

ಉಡುಪಿ (71), ಶಿವಮೊಗ್ಗ(64), ಬೆಂಗಳೂರು ನಗರ (64), ದಕ್ಷಿಣಕನ್ನಡ(22), ಬೆಂಗಳೂರು ಗ್ರಾಮಾಂತರ(13), ದಾವಣಗೆರೆ (9) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾವೆ.ರಾಜ್ಯದಲ್ಲಿ ಈವರೆಗೆ ಎಚ್‌1ಎನ್‌1 ಜ್ವರಕ್ಕೆ ಮೂವರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT