ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿರುವ ಬಡವರಿಗೆ ಅಕ್ರಮ– ಸಕ್ರಮ ಯೋಜನೆಯಡಿ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಂದಾಯ ಸಚಿವ ಆರ್.ಅಶೋಕ ಅವರು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ‘ಇದೇ 28 ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಲಿದ್ದಾರೆ’ ಎಂದು ತಿಳಿಸಿದರು.

‘30 ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸವಿರುವ ಬಡವರಿಗೆ ಮಾತ್ರ ಅಕ್ರಮ– ಸಕ್ರಮ ಯೋಜನೆ ಅನ್ವಯವಾಗುತ್ತದೆ. 20x30 ಅಡಿ ಮತ್ತು 30x40 ಅಡಿ ಅಳತೆಯಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ಕ್ರಯಪತ್ರ ನೀಡಲಾಗುವುದು’ ಎಂದರು.

‘ಕಂದಾಯ ಇಲಾಖೆಯುಹಕ್ಕುಪತ್ರ ನೀಡುವ ಸಂಬಂಧ ಮತದಾರರ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಮನೆಗಳಿಗೆ ಪಡೆದಿರುವ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಮುಂತಾದ ದಾಖಲೆಗಳನ್ನು ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಅರ್ಹರನ್ನು ಮಾತ್ರ ಪರಿಗಣಿಸಲಾಗಿದೆ. ಮನೆಗಳನ್ನು ಕಟ್ಟಿಕೊಂಡಿರುವ ಸ್ಥಳ ಪರಿಶೀಲನೆ ನಡೆಸಲಾಗಿದೆ’ ಎಂದರು.

20x30 ಅಡಿ ವಿಸ್ತೀರ್ಣದ ನಿವೇಶನದಲ್ಲಿರುವ ಮನೆಗಳಿಗೆ ಹಕ್ಕುಪತ್ರ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ₹2,500, ಸಾಮಾನ್ಯ ವರ್ಗದವರಿಗೆ ₹5,000 ಶುಲ್ಕ ನಿಗದಿ ಮಾಡಲಾಗಿದೆ.30X40 ಅಡಿ ಅಳತೆಯ ನಿವೇಶನದಲ್ಲಿರುವ ಮನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರು ₹5,000 ಮತ್ತು ಸಾಮಾನ್ಯ ವರ್ಗದವರು ₹10,000 ಶುಲ್ಕ ಪಾವತಿಸಬೇಕು ಎಂದರು.

ವಿಜಯನಗರ ಜಿಲ್ಲೆ ರಚನೆ: ಪ್ರಸ್ತಾವನೆ
ಬೆಂಗಳೂರು: ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿ ಬಳ್ಳಾರಿ ಡಿ.ಸಿಯಿಂದ ಪ್ರಸ್ತಾವನೆ ಬಂದಿದ್ದು, ಮುಖ್ಯಮಂತ್ರಿಯವರಿಗೆ ಕಳುಹಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಜಿಲ್ಲೆ ವಿಭಜನೆಗೆ ಇಲಾಖೆಯ ಒಪ್ಪಿಗೆ ಇದೆ. ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳುವರು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.