ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ, ಗೋಳಗುಮ್ಮಟ ಇಂದಿನಿಂದ ವೀಕ್ಷಣೆಗೆ ಮುಕ್ತ

Last Updated 5 ಜುಲೈ 2020, 19:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹೊಸಪೇಟೆಯಲ್ಲಿರುವ ಹಂಪಿ ಸ್ಮಾರಕಗಳು ಹಾಗೂ ವಿಜಯಪುರದಲ್ಲಿರುವ ಗೋಳಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ಆದಿಲ್ ಶಾಹಿಕಾಲದ ಎಲ್ಲ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಜು.6ರ ಸೋಮವಾರದಿಂದ ಮುಕ್ತವಾಗುತ್ತಿವೆ.

ಮೇ 7ರಂದು ರಾಜ್ಯ ಸರ್ಕಾರ ಲಾಕ್‌ಡೌನ್‌ ಸಡಿಲಿಸಿತ್ತು. ಆದರೆ, ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ ತೆರೆಯಲಷ್ಟೇ ಅನುಮತಿ ನೀಡಲಾಗಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯು (ಎಎಸ್ಐ) ಹಂಪಿಯ ಎಲ್ಲ ಸ್ಮಾರಕಗಳನ್ನು ಸೋಮವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲು ನಿರ್ಧರಿಸಿದೆ. ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಸ್ಮಾರಕಗಳಿಗೆ ಭೇಟಿ ನೀಡಬಹುದು. ಪ್ರತಿದಿನ 2000 ಜನ ಪ್ರವಾಸಿಗರಿಗೆ ಅವಕಾಶ ನೀಡಲಾಗುವುದು. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದುಎಎಸ್ಐ ಡೆಪ್ಯುಟಿ ಸೂಪರಿಟೆಂಡೆಂಟ್‌ ಪಿ. ಕಾಳಿಮುತ್ತು ತಿಳಿಸಿದ್ದಾರೆ.

ವಿಜಯಪುರದ ಎಲ್ಲ ಸ್ಮಾರಕಗಳ ವೀಕ್ಷಣೆಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಅವಕಾಶ ಇದೆ. ಪ್ರವೇಶ ಶುಲ್ಕವನ್ನು ಕ್ಯೂಆರ್ ಕೋಡ್ ಸ್ಕ್ಯಾನ್‌ ಮಾಡಿ ಪಾವತಿಸಬೇಕು ಎಂದು ಎಎಸ್ಐ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT