ಶುಕ್ರವಾರ, ಏಪ್ರಿಲ್ 3, 2020
19 °C
ಪತ್ರಿಕೆಗೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಅಭಿನಂದನೆ

ಹಂಪಿ ಕನ್ನಡ ವಿವಿ ಕೇಂದ್ರ: ತೆರವು ಕೈಬಿಟ್ಟ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾದಾಮಿ: ಸಮೀಪದ ಬನಶಂಕರಿಯಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಕೇಂದ್ರವನ್ನು ತೆರವು ಮಾಡದೇ, ಬೇರೆ ಜಾಗದಲ್ಲಿ ಟೂರಿಸಂ ಪ್ಲಾಜಾ ನಿರ್ಮಾಣಕ್ಕೆ ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬನಶಂಕರಿಯಲ್ಲಿ ರುವ ಕೇಂದ್ರವನ್ನು ತೆರವುಗೊಳಿಸಲು ಪ್ರವಾಸೋದ್ಯಮ ಇಲಾಖೆ ಪತ್ರ →ಬರೆದಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ  →ಡಿ. 3ರಂದು ‘ಹಂಪಿ ಕವಿವಿ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರ ಸ್ಥಳಾಂತರಕ್ಕೆ ಸೂಚನೆ ತ್ರಿ-ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಸಿದ್ಧತೆ’  ವರದಿ ಪ್ರಕಟವಾಗಿತ್ತು.

ಸ್ಥಳೀಯ ಜನಪ್ರತಿನಿಧಿಗಳು, ಅಭಿವೃದ್ಧಿ ಹೋರಾಟ ಸಮಿತಿ, ವಿವಿಧ ಸಂಘಟನೆಗಳು ಪ್ರವಾಸೋದ್ಯಮದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮಾಜಿ ಶಾಸಕರಾದ ಬಿ.ಬಿ. ಚಿಮ್ಮನಕಟ್ಟಿ, ಎಂ.ಕೆ. ಪಟ್ಟಣಶೆಟ್ಟಿ, ಎಸ್.ಜಿ. ನಂಜಯ್ಯನಮಠ ಸರ್ಕಾರಕ್ಕೆ ಮತ್ತು ಸ್ಥಳೀಯ ಶಾಸಕ ಸಿದ್ದರಾಮಯ್ಯ ಅವರಿಗೆ ಸೂಕ್ತ ಕ್ರಮಕೈಗೊಳ್ಳಲು
ಒತ್ತಾಯಿಸಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು