ಹಂಪಿ ಉತ್ಸವಕ್ಕೆ ಅಡ್ಡಿಯಾದ ಉಪ ಚುನಾವಣೆ

7

ಹಂಪಿ ಉತ್ಸವಕ್ಕೆ ಅಡ್ಡಿಯಾದ ಉಪ ಚುನಾವಣೆ

Published:
Updated:

ಬಳ್ಳಾರಿ: ಹಂಪಿಯಲ್ಲಿ ಪ್ರತಿ ವರ್ಷ ನವೆಂಬರ್ 3ರಿಂದ 5ರವರೆಗೆ ಹಂಪಿ ಉತ್ಸವ ನಡೆಯುವ ಸಂಪ್ರದಾಯಕ್ಕೆ ಈ ಬಾರಿ ಅಡಚಣೆ ಎದುರಾಗಿದೆ.

ನ.3ರಂದೇ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಉತ್ಸವವನ್ನು ಮುಂದೂಡಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ.

ಉತ್ಸವದಲ್ಲಿ ಪಾಲ್ಗೊಳ್ಳಲು ಸ್ಥಳೀಯ ಕಲಾವಿದರಿಂದ ಜಿಲ್ಲಾಡಳಿತ ಅರ್ಜಿಗಳನ್ನು ಆಹ್ವಾನಿಸಿತ್ತು. ವೇದಿಕೆಗಳ ನಿರ್ಮಾಣ ಮತ್ತು ಮೂಲಸೌಕರ್ಯ ಕಲ್ಪಿಸುವುದಕ್ಕೆ ಸಂಬಂಧಿಸಿ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್‌ ಮನೋಹರ್‌ ಶುಕ್ರವಾರವಷ್ಟೇ ತಿಳಿಸಿದ್ದರು.

ಬಿ.ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ನಂತರ ಸಂಸತ್‌ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !