‘ಪರಿಶಿಷ್ಟ ಸಮುದಾಯದ ಮೇಲಿನ ದೌರ್ಜನ್ಯ: ಗೊಂದಲ ನಿವಾರಣೆಗೆ ಕೈಪಿಡಿ’

7

‘ಪರಿಶಿಷ್ಟ ಸಮುದಾಯದ ಮೇಲಿನ ದೌರ್ಜನ್ಯ: ಗೊಂದಲ ನಿವಾರಣೆಗೆ ಕೈಪಿಡಿ’

Published:
Updated:

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರ ಮೇಲೆ ದೌರ್ಜನ್ಯ ನಡೆದ ಸಂದರ್ಭದಲ್ಲಿ ಪೊಲೀಸರು ಎಫ್‌ಐಆರ್‌ (ಪ್ರಥಮ ವರ್ತಮಾನ ವರದಿ) ದಾಖಲಿಸುವಾಗ ಉಂಟಾಗುವ ಗೊಂದಲ ನಿವಾರಣೆಗೆ ಸಮಾಜ ಕಲ್ಯಾಣ ಇಲಾಖೆ ಸಿದ್ಧಪಡಿಸಿದ ಕೈಪಿಡಿ, ಪೊಲೀಸರು ಮತ್ತು ಇತರ ಅಧಿಕಾರಿಗಳಿಗೆ ಉಪಯುಕ್ತವಾಗಲಿದೆ’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

‘ಈ ಸಮುದಾಯದ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಪರಾಧಗಳು ಮತ್ತು ಪರಿಹಾರ ವಿವರಗಳನ್ನು ಒಳಗೊಂಡ ಈ ಕೈಪಿಡಿ, ಸಮಾಜದ ಇತರ ವರ್ಗಗಳಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲು ಅನುಕೂಲ ಆಗಲಿದೆ’ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ –2015 ಮತ್ತು ತಿದ್ದುಪಡಿ ನಿಯಮಗಳು– 2016 ಅಡಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಕೈಪಿಡಿಯಲ್ಲಿ ಮಾಹಿತಿಗಳಿವೆ.

‘ದೌರ್ಜನ್ಯಕ್ಕೊಳಗಾದವರಿಗೆ ಶೀಘ್ರ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಈ ಕೈಪಿಡಿ ಸಿದ್ಧಪಡಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

‘ಗಂಭೀರ ಸ್ವರೂಪದ ದೌರ್ಜನ್ಯ ಪ್ರಕರಣಗಳು ನಡೆದ ಸಂದರ್ಭಗಳಲ್ಲಿ ದೌರ್ಜನ್ಯ ನಿಷೇಧ ಕಾಯ್ದೆಯಡಿ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಇದರಲ್ಲಿ ವಿವರಗಳಿವೆ. ಸಂತ್ರಸ್ತ ವ್ಯಕ್ತಿ ಅಥವಾ ಅವರ ಅವಲಂಬಿತರಿಗೆ ನ್ಯಾಯಾಲಯದ ವಿಚಾರಣೆ ಹಾಗೂ ಜಾಮೀನು ಪಡೆಯುವ ವಿಷಯದಲ್ಲಿ ಪ್ರಾಸಿಕ್ಯೂಷನ್‌ ನಿರ್ವಹಿಸಬೇಕಾದ ಕರ್ತವ್ಯಗಳ ವಿವರಗಳೂ ಇವೆ’ ಎಂದರು.

ಬರಹ ಇಷ್ಟವಾಯಿತೆ?

 • 3

  Happy
 • 2

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !