ಹರಿಹರ: 8ರಿಂದ ವಾಲ್ಮೀಕಿ ಜಾತ್ರೆ

7

ಹರಿಹರ: 8ರಿಂದ ವಾಲ್ಮೀಕಿ ಜಾತ್ರೆ

Published:
Updated:
Prajavani

ಹರಿಹರ: ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಫೆ.8 ಹಾಗೂ ಫೆ.9ರಂದು ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಬೃಹತ್ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಹಾಗೂ ಅರಣ್ಯ ಸಚಿವ ಸತೀಶ್ ಜಾರಿಕಿಹೊಳಿ ತಿಳಿಸಿದರು.

ತಾಲ್ಲೂಕಿನ ರಾಜಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಭಾನುವಾರ ನಡೆದ ಜಾತ್ರಾ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ‘ರಾಮಾಯಣದಂಥ ಮಹಾಕಾವ್ಯ ಬರೆದ ವಾಲ್ಮೀಕಿ ಅವರ ಸ್ಮರಣೆಯ ಜತೆಗೆ ಅರಿವು ಮೂಡಿಸುವ ಹಾಗೂ ಸಾಧಕರಿಗೆ ಗೌರವಿಸಲು ಮಠದ ಆವರಣದಲ್ಲಿ ಆಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಜಾತ್ರೆಯಲ್ಲಿ ಫೆ. 8ರಂದು ಧಾರ್ಮಿಕ, ವೈಚಾರಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಕೌಟುಂಬಿಕ, ಆಧ್ಯಾತ್ಮಿಕ ವಿಷಯಗಳ ಬಗ್ಗೆ ಗೋಷ್ಠಿಗಳು, ಫೆ. 9ರಂದು ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ  ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಭಾಗವಹಿಸುವರು’ ಎಂದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !