ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಭಾರತದ ರಾಜ್ಯಗಳಲ್ಲಿ ದೂಳು ಸಹಿತ ಬಿರುಗಾಳಿ, ಮಳೆಗೆ ಮೂವರು ಸಾವು

Last Updated 9 ಮೇ 2018, 16:30 IST
ಅಕ್ಷರ ಗಾತ್ರ

ನವದೆಹಲಿ/ ಮಥುರಾ: ಉತ್ತರ ಭಾರತದ ರಾಜ್ಯಗಳಲ್ಲಿ ಬುಧವಾರ ಸಂಜೆ ಮತ್ತೆ ದೂಳಿನಿಂದ ಕೂಡಿದ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆ ಬಿದ್ದಿದ್ದು, ಉತ್ತರ ಪ್ರದೇಶದಲ್ಲಿ ಇಬ್ಬರು, ಅಸ್ಸಾಂನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಮಧ್ಯಪ್ರದೇಶದ ಮಥುರಾ ಜಿಲ್ಲೆಯಲ್ಲಿ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. 20 ನಿಮಿಷ ಬೀಸಿದ ಬಿರುಗಾಳಿಗೆ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ಮನೆಗಳ ಮೇಲ್ಚಾವಣಿಗಳು ಕಿತ್ತುಹೋಗಿವೆ. 

ಆರಂಭದಲ್ಲಿ 20 ನಿಮಿಷ ಗಾಳಿ ಬೀಸಿದೆ. ಬಳಿಕ, ಇದು ತನ್ನ ವೇಗವನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಸ್ಸಾಂನಲ್ಲಿ ಬಿರುಗಾಳಿ ಸಹಿತ ಮಳೆಗೆ ಒಬ್ಬರು ಮೃತಪಟ್ಟು, 11 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT