ಚಿನ್ನದ ಗಣಿ ಕುಸಿತ: ಕಾರ್ಮಿಕ ಸಾವು

7

ಚಿನ್ನದ ಗಣಿ ಕುಸಿತ: ಕಾರ್ಮಿಕ ಸಾವು

Published:
Updated:

ರಾಯಚೂರು: ಲಿಂಗಸುಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿಯಲ್ಲಿ ಭಾನುವಾರ ಬೆಳಗಿನ ಜಾವ ಗಣಿ ಕುಸಿತವಾಗಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಲಿಂಗಸುಗೂರು ತಾಲ್ಲೂಕು ಆನ್ವರಿ ಗ್ರಾಮದ ದಾವಲಸಾಬ್‌ ಮಹಮ್ಮದ್ ಹುಸೇನ್‌ (44) ಮೃತಪಟ್ಟವರು. ಗಾಯಗೊಂಡವರಿಗೆ ಕಂಪನಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸಹ ಕಾರ್ಮಿಕ ಮೃತಪಟ್ಟಿದ್ದರಿಂದ ರೊಚ್ಚಿಗೆದ್ದ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಆರಂಭಿಸಿದರು. ‘ಗಣಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಮೃತನ ಕುಟುಂಬಕ್ಕೆ ತಕ್ಷಣ ಉದ್ಯೋಗ ಮತ್ತು ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಕಾರ್ಮಿಕರ ಬೇಡಿಕೆಗೆ ಸ್ಪಂದಿಸಿದ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಪ್ರಭಾಕರ ಸಂಗೂರಮಠ ಅವರು, ‘ಮೃತ ಕಾರ್ಮಿಕನ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ಮತ್ತು ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !