ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರುಣನ ಅಬ್ಬರ: ಮನೆಗಳಿಗೆ ನುಗ್ಗಿದ ನೀರು

ಕೃಷ್ಣಾ ನದಿ ಹರಿವು ಹೆಚ್ಚಳ, ಏಳು ಬ್ಯಾರೇಜ್‌ ಜಲಾವೃತ; ಘಟಪ್ರಭಾ ನದಿಯಲ್ಲಿ ಪ್ರವಾಹ ಭೀತಿ
Last Updated 9 ಜುಲೈ 2020, 19:31 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಆಗಿದೆ. ಹಲವು ಕಡೆ ಮನೆಗಳು ಕುಸಿದಿವೆ. ಕೃಷ್ಣಾ ನದಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಏಳುಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಜಲಾವೃತವಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಹಲವೆಡೆಬುಧವಾರ ತಡರಾತ್ರಿಯಿಂದ ಆರಂಭವಾದ ಭಾರಿ ವರ್ಷಧಾರೆಯು ಗುರುವಾರ ದಿನವಿಡೀ ಮುಂದುವರಿ ಯಿತು.ಕಾರವಾರ ತಾಲ್ಲೂಕಿನ ಅಮದಳ್ಳಿ, ಮುದಗಾದಲ್ಲಿ ಗುಡ್ಡದಿಂದ ನೀರು ಹೆದ್ದಾರಿಯಲ್ಲಿ ಹರಿದು ಬಂದು ಎರಡು ತಾಸಿಗೂ ಅಧಿಕ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.

ಅಂಕೋಲಾ ತಾಲ್ಲೂಕಿನ ಅವರ್ಸಾ, ಹಟ್ಟಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನಿಂದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳಿದರು.ಕಾರವಾರ ತಾಲ್ಲೂಕಿನ ಕಿನ್ನರದಲ್ಲೂ ಮನೆಗಳು ಜಲಾವೃತವಾದವು.

ಯಲ್ಲಾಪುರ ತಾಲ್ಲೂಕಿನ ಡಬ್ಗುಳಿಯಲ್ಲಿ ಭೂಕುಸಿತವಾಗ ದ್ದು, ವಾಹನ ಸಂಚಾರಸ್ಥಗಿತವಾ ಗಿತ್ತು. ಹೊಳೆ ತುಂಬಿ ಹರಿಯುತ್ತಿದ್ದು,ಯಲ್ಲಾಪುರ–ಮುಂಡ ಗೋಡನಡುವಿನ ತಾತ್ಕಾಲಿಕ ಸೇತುವೆ ಮುಳುಗಡೆಯಾಗಿತ್ತು.

ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ ಜಿಲ್ಲೆ ಗಳಲ್ಲಿ ಉತ್ತಮ ಮಳೆಯಾಗಿದೆ. ಜಮಖಂಡಿಯ ಸಾವಳಗಿಯಲ್ಲಿ ಮಳೆ ಯಿಂದಾಗಿ 14 ಮನೆಗಳು ಕುಸಿದಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ ಏಳು ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಜಲಾವೃತವಾಗಿವೆ.ದೂಧ್‌ಗಂಗಾ ನದಿಯಿಂದ15,488 ಕ್ಯುಸೆಕ್, ರಾಜಾಪುರ ಬ್ಯಾರೇಜ್‌ನಿಂದ 46,750 ಕ್ಯುಸೆಕ್ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 62,228 ಕ್ಯುಸೆಕ್ ನೀರು ಸೇರಿಕೊಳ್ಳುತ್ತಿದೆ.

ಘಟಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದ್ದು ಮಿರ್ಜಿ–ಮಲ್ಲಾಪುರ ನಡುವಿನ ಸೇತುವೆ ಮುಳುಗಡೆಯಾಗಿದೆ. ಇದರಿಂದ ಮಹಾಲಿಂಗಪುರ, ಯಾದವಾಡ ಸಂಪರ್ಕ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, 10 ಗ್ರಾಮಗಳಿಗೆ ಸಂಚಾರ ಸ್ಥಗಿತಗೊಂಡಿದ್ದು, ಪ್ರವಾಹ ಭೀತಿ ಎದುರಾಗಿದೆ.

ಸಾಧಾರಣ ಮಳೆ:ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ಮೈಸೂರಿನಲ್ಲೂ ಮಳೆಯಾಗಿದೆ.ಉಡುಪಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.ಬ್ರಹ್ಮಾವರದ ಚೇರ್ಕಾಡಿಯಲ್ಲಿ ಗಾಳಿ ಮಳೆಯಿಂದ ಮನೆಗೆ ಭಾಗಶಃ ಹಾನಿಯಾಗಿದೆ. ಕರಾವಳಿ ಭಾಗದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, 3 ಮೀಟರ್‌ಗಿಂತ ದೈತ್ಯ ಅಲೆಗಳು ಏಳಲಿವೆ. ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಮುಂಡಾಜೆಯ ಸೋಮಂತಡ್ಕ ಸಮೀಪ ರಾಷ್ಟ್ರೀಯ ಹೆದ್ದಾರಿ 73ರ (ಮಂಗಳೂರು–ಚಿಕ್ಕಮಗಳೂರು) ಮೇಲೆ ಮರ ಬಿದ್ದು, ಸುಮಾರು ಒಂದು ತಾಸು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ಶಿವಮೊಗ್ಗ ಜಿಲ್ಲೆಯಲ್ಲಿ ವರುಣನ ಅಬ್ಬರ ಕೊಂಚ ಕಡಿಮೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.ಕಲಬುರ್ಗಿ, ಯಾದಗಿರಿ ಜಿಲ್ಲೆಯ ಕೆಲವೆಡೆ ಮಳೆ ಆಗಿದೆ.

ಇದೇ 14ರವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜು.10ರಿಂದ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ’ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

ಮಳೆ-ಎಲ್ಲಿ, ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ ಗರಿಷ್ಠ 17 ಸೆಂ.ಮೀ. ಮಳೆಯಾಗಿದೆ. ಹೊಸನಗರ 15, ಕೊಲ್ಲೂರು, ಗೋಕರ್ಣ 10, ಭಟ್ಕಳ, ಹೊನ್ನಾವರ 8, ಕಾರ್ಕಳ 7, ಕೋಲಾರ 6, ಸುಬ್ರಹ್ಮಣ್ಯ, ಕಾರವಾರ, ತೀರ್ಥಹಳ್ಳಿ, ಗುಡಿಬಂಡೆ 5, ಮೂಡುಬಿದಿರೆ, ಕುಂದಾಪುರ, ಮಾಲೂರು, ಚನ್ನಪಟ್ಟಣ 4, ಸುಳ್ಯ, ಉಡುಪಿ, ಜಮಖಂಡಿ, ಭಾಗಮಂಡಲ, ಸೊರಬ, ಬಂಗಾರಪೇಟೆ, ಕನಕಪುರ 3, ಹುಕ್ಕೇರಿ, ಅಥಣಿ, ಹಾವೇರಿ, ವಿಜಯಪುರ, ರಾಯಚೂರು, ಮಂಡ್ಯ, ಪಾಂಡವಪುರ, ಚಿಂತಾಮಣಿ, ಚಿಕ್ಕಬಳ್ಳಾಪುರ, ಗೌರಿಬಿದನೂರು ಹಾಗೂ ಕುಣಿಗಲ್‍ನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಚಾರ್ಮಾಡಿ: ವಾಹನ ಸಂಚಾರ ನಿರ್ಬಂಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ (ಎನ್‌.ಎಚ್‌–73) ಗುರುವಾರದಿಂದ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚಾರ್ಮಾಡಿ ಘಾಟಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಾರ್ಗದಲ್ಲಿ ಗುಡ್ಡದ ಮಣ್ಣು ಕುಸಿಯುವ ಸಾಧ್ಯತೆ ಇದ್ದು, ಮುಂಜಾಗ್ರತೆಯಾಗಿ ರಾತ್ರಿ 7ರಿಂದ ಬೆಳಿಗ್ಗೆ 7ಗಂಟೆ ವರೆಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT