ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪೀಡಿತರ ಚಿಕಿತ್ಸೆಗೆ ಎಚ್‌.ಡಿ. ಕ್ಯಾಮೆರಾ: ಸುಧಾಕರ್‌

Last Updated 14 ಜೂನ್ 2020, 19:31 IST
ಅಕ್ಷರ ಗಾತ್ರ

ಕಲಬುರ್ಗಿ: ‘ಕೋವಿಡ್‌ ಪೀಡಿತರಿಗೆ ಚಿಕಿತ್ಸೆ ನೀಡುವ ವಿಷಯದಲ್ಲಿ ಸ್ಥಳೀಯ ವೈದ್ಯರಿಗೆ ಸಲಹೆ ನೀಡಲು ಬೆಂಗಳೂರಿನಲ್ಲಿ ಐಸಿಯು ಘಟಕ ಆರಂಭಿಸಲಾಗಿದೆ. ಪ್ರತಿಯೊಂದು ಜಿಲ್ಲೆಯ ಕೋವಿಡ್ ವಾರ್ಡ್‌ಗಳಲ್ಲಿ ರೋಗಿಗಳ ಚಿಕಿತ್ಸೆ ವೇಳೆ ಎಚ್‌.ಡಿ ಕ್ಯಾಮೆರಾ ಬಳಸ ಲಾಗು ವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಭಾನು‌ವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಕೋವಿಡ್‌ ಕುರಿತು ಕೈಗೊಳ್ಳಲಾದ ಕ್ರಮದ ಬಗ್ಗೆ ಮಾಹಿತಿ ಪಡೆದ ಅವರು, ‘ಬೆಂಗಳೂರಿನಲ್ಲಿ ನಾಲ್ಕು ಪಾಳಿಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಪರಿಣತಿ ಹೊಂದಿದ ಏಳೆಂಟು ವೈದ್ಯರು ಐಸಿಯುನಲ್ಲಿ ಕುಳಿತು ವಿವಿಧ ಜಿಲ್ಲೆಗಳಲ್ಲಿರುವ ರೋಗಿಗಳಿಗೆ ಯಾವ ಚಿಕಿತ್ಸೆ ನೀಡಬೇಕು ಎಂಬುದನ್ನು ತಿಳಿಸುವರು. ಕಲಬುರ್ಗಿಯಲ್ಲಿ ಸೋಮವಾರ (ಜೂನ್ 15) ಎಚ್‌.ಡಿ. ಕ್ಯಾಮೆರಾ ಅಳವಡಿಸಲಾಗುವುದು’ ಎಂದರು.

ಕೋವಿಡ್‌ ಅಲ್ಲದ ರೋಗಿಗಳಿಗೆ ಚಿಕಿತ್ಸೆ: ‌‘ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿ ಇರುವ ಕಾರಣ ಕೋವಿಡ್‌ ಅಲ್ಲದ ರೋಗಿಗಳ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಆದೇಶ ಹೊರಡಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT