ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

87ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ

Last Updated 18 ಮೇ 2019, 8:37 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಅವರ 87ನೇ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರುಶುಭ ಕೋರಿದ್ದಾರೆ.

ಟ್ವಿಟರ್‌ನಲ್ಲಿ ಶುಭ ಕೋರಿರುವ ಪ್ರಧಾನಿ ಮೋದಿ, ‘ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ದೀಘ್ರಕಾಲ ಉತ್ತಮ ಆರೋಗ್ಯ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಇತ್ತ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ‘ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರೈತರು ಮತ್ತು ಗ್ರಾಮ ಭಾರತದ ಬಗೆಗಿನ ಅವರ ಕಾಳಜಿ ಹಾಗೂ ಇಳಿವಯಸ್ಸಿನಲ್ಲಿಯೂ ದಣಿವರಿಯದ ಹೋರಾಟದ ಕೆಚ್ಚು ನನಗೆ ಸದಾ ಪ್ರೇರಣೆ. ಅವರಿಗೆ ಆರೋಗ್ಯ ಮತ್ತು ಆಯುಷ್ಯವನ್ನು ಹಾರೈಸುತ್ತೇನೆ’ ಎಂದು ಬರೆದಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಮಮತಾ ಬ್ಯಾನರ್ಜಿ ಅವರೂ ಕೂಡ ಟ್ವಿಟರ್‌ನಲ್ಲಿ ಶುಭ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT