ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸುತ್ತಿಲ್ಲ: ಎಚ್.ಡಿ.ದೇವೇಗೌಡ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆಗೆ ತೀರ್ಮಾನ
Last Updated 5 ನವೆಂಬರ್ 2019, 12:28 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸುತ್ತಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

ನಗರದ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಎಲ್ಲ ಕಡೆ ಸ್ಪರ್ಧೆ ಮಾಡುತ್ತೇವೆ. ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ವಾಗಿ ನಾವು ಹೋರಾಟ ಮಾಡುತ್ತೇವೆ‘ ಎಂದು ಹೇಳಿದರು.

‘ಜೆಡಿಎಸ್‌ನವರು ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸುತ್ತಿರುವುದಾಗಿ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ನೋಡಿದ್ದೇನೆ. ಬಿಜೆಪಿ ಅಥವಾ ಕಾಂಗ್ರೆಸ್ ಬಗ್ಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ ನಾವು ಯಾವುದೇ ಸಂದರ್ಭದಲ್ಲಿಯೂ ತೋರಿಸಲ್ಲ‘ ಎಂದರು.

ಪುರಸಭೆ, ನಗರಸಭೆಗೆ, ಯಾರ ಜೊತೆಗೂ ನಾವು ಸಂಬಂಧ ಇಟ್ಟುಕೊಂಡಿಲ್ಲ ಕಾಂಗ್ರೆಸ್, ಬಿಜೆಪಿ ವಿರುದ್ದವಾಗಿ ನಾವು ಹೋರಾಟ ಮಾಡುತ್ತೇವೆ. ಮಂಗಳೂರು, ದಾವಣಗೆರೆ ನಗರ ಪಾಲಿಕೆಯಲ್ಲಿ ಪೂರ್ತಿ ಅಭ್ಯರ್ಥಿಗಳನ್ನು ಹಾಕಿಲ್ಲ ಎಂದರು.

ಕೆಲವು ಘಟನೆಗಳಿಂದ ಸಾಫ್ಟ್ ಕಾರ್ನರ್‌ ಅನ್ನುವ ಬಗ್ಗೆ ಚರ್ಚೆಯಾಗಿತ್ತು. ಆದರೆ,ಯಾವುದೇ ಸಂದರ್ಭದಲ್ಲೂ ಬಿಜೆಪಿ, ಕಾಂಗ್ರೆಸ್ ‌ಮೇಲೆ ಸಾಫ್ಟ್ ಕಾರ್ನರ್ ಇಲ್ಲ. ಚುನಾವಣೆಯಲ್ಲಿಕೆಲವು ಕಡೆ ಉತ್ತಮ ಫಲಿತಾಂಶ ಬರುವ ವಿಶ್ವಾಸ ಇದೆ ಎಂದು ತಿಳಿಸಿದರು.

ಹೀಗಾಗಿ ನಮ್ಮ ಸಾಮರ್ಥ್ಯ ಎಷ್ಟಿದಯೋ ಅಷ್ಟು ಸ್ಪರ್ಧೆ ಮಾಡ್ತೇವೆ ನಾವು ಯಾರ ಜೊತೆಗೂ ನಂಟಸ್ತನ ಮಾಡೋದಿಲ್ಲ ನೇರವಾಗಿಯೇ ನಾವು ಚುನಾವಣೆ ಎದುರಿಸುತ್ತೇವೆ ಇದರಲ್ಲಿ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

ಇದೇ 12ರಂದು ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸುತ್ತೇವೆ ಎಂದರು.

ಅನರ್ಹರ ಕುರಿತು ಸುಪ್ರೀಂ ತೀರ್ಪು ಹಿನ್ನೆಲೆ..
ಇವತ್ತು ತೀರ್ಪು ಬರುತ್ತೆ ಎಂದುಕೊಂಡಿದ್ದೇವು. ಆದರೆ, ಕಾಂಗ್ರೆಸ್ ವಿಡಿಯೊ ವಾದದಿಂದ ತೀರ್ಪು ಮುಂದೆ ಹೋಗಿದೆ ಎಂದರು.

ಉಪಚುನಾವಣೆಯಲ್ಲಿ 17 ಕ್ಷೇತ್ರಗಳ ಪೈಕಿ ಎಲ್ಲ ಕಡೆಯೂ ನಿಲ್ಲುವ ಬಗ್ಗೆ ತೀರ್ಮಾನ ಮಾಡಲಾಗಿದೆ ಪಕ್ಷದ ಕಾರ್ಯಕರ್ತರಿಗೆ ನಿರಾಸೆ ಬಾರದ ರೀತಿ ಎಲ್ಲಾ ಕಡೆ ಅಭ್ಯರ್ಥಿಗಳನ್ನು ಹಾಕುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದೇವೆ. ಈಗಾಗಲೇ ಅಭ್ಯರ್ಥಿ ಗುರುತಿಸುವ ಬಗ್ಗೆ ಅಂತಿಮ ಚರ್ಚೆ ಆಗಿದ್ದು, ಈಗಾಗಲೇ 70ರಷ್ಟು ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಗಿದಿದೆ.

ಚುನಾವಣೆಯಲ್ಲಿ ಯಾರ ಜೊತೆಗೂ ಮೈತ್ರಿ ಇಲ್ಲ ನಾವು ಸ್ವತಂತ್ರವಾಗಿಯೇ ಸ್ಪರ್ಧಿಸಿ ಗೆಲ್ಲುತ್ತೇವೆ.
ಈಗಾಗಲೇ ಬಿಜೆಪಿ, ಕಾಂಗ್ರೆಸ್ ಜೊತೆ ಮೈತ್ರಿಯಾಗಿದೆ. ಈಗಾಗಲೇ ಇವರೆಡರಿಂದ ಕಹಿ ಅನುಭವ ಕೂಡ ಆಗಿದೆ ವಿಪಕ್ಷ ಸ್ಥಾನದಲ್ಲಿ ಕುಳಿತು ಹೋರಾಟ ಮಾಡಿದರೂ, ಅವರಿಬ್ಬರ ಜೊತೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಗುರುಮಿಟ್ಕಲ್‌ನಲ್ಲಿ ಜೆಡಿಎಸ್ ಕಾರ್ಯಕರ್ತನ ಮೇಲೆ ಪೊಲೀಸ್ ದೌರ್ಜನ್ಯ ವಿಚಾರ ಬಿಎಸ್‌ವೈ ನಿವಾಸದ ಎದುರು ಇದೇ 15ರಂದು ಧರಣಿ ನಡೆಸುವುದಾಗಿ ತಿಳಿಸಿದರು.

ನಮ್ಮ ಪಕ್ಷದ ಯುವ ಮುಖಂಡನ ಬಾಯಿಗೆ ಪಿಸ್ತೂಲ್ ಇಟ್ಟು ಹಿಂಸೆ ಕೊಟ್ಟಿದ್ದಾರೆ ಪಕ್ಷದ ಕಾರ್ಯಕರ್ತರಿಗೆ ಆಗುತ್ತಿರುವ ಕಿರುಕುಳ ನಿಲ್ಲಬೇಕು ಇಲ್ಲದಿದ್ರೆ ನಾನು ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸುತ್ತೇವೆ.

ಗುರುಮಿಟ್ಕಲ್ ಶಾಸಕ ನಾಗನಗೌಡ ಕಂದಕೂರ್ ಪುತ್ರ ಶರಣುಗೌಡ ಪಾಟೀಲ್ ಮೇಲೆ ಪೊಲೀಸ್ ದೌರ್ಜನ್ಯ ಆಗಿತ್ತು ಇದೆಲ್ಲ ನೋಡಿದರೆ ರಾಜ್ಯದಲ್ಲಿ ಭಯ ಹುಟ್ಟಿಸುವ ವಾತಾವರಣ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT