ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಚಟುವಟಿಕೆ ಮತ್ತು ಜನರ ಸಮಸ್ಯೆಗಳತ್ತ ಗಮನ ಹರಿಸಲು ಮೋದಿಗೆ ದೇವೇಗೌಡ ಮನವಿ

Last Updated 3 ಏಪ್ರಿಲ್ 2020, 12:51 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಕಾರ್ಯಕರ್ತರಿಗೆ ಬೆಂಬಲ ಮತ್ತು ಕೃತಜ್ಞತೆ ಸಲ್ಲಿಸುವ ಪ್ರಧಾನಿ ಮೋದಿಯವರ ಆಲೋಚನೆಯನ್ನು ನಾನು ಸ್ವಾಗತಿಸುತ್ತೇನೆ. ಇದರ ಜತೆಗೆ ಕೋವಿಡ್ -19 ರೋಗ ಪತ್ತೆ ಪರೀಕ್ಷೆಶೀಘ್ರವೇಹೆಚ್ಚು ಮಾಡುವ ಅಗತ್ಯವಿದೆ. ತಪಾಸಣೆ ಜಾಸ್ತಿಯಾದರೆ ಸರ್ಕಾರಿ ಐಸೋಲೇಷನ್ ಕೇಂದ್ರದಲ್ಲಿ ರೋಗಿಗಳು ಹೆಚ್ಚಾಗುವುದನ್ನು ತಡೆಯಬಹುದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿ ಸರಣಿ ಟ್ವೀಟ್ ಮಾಡಿರುವ ದೇವೇಗೌಡರು ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗದಂತೆ ನಾವು ನೋಡಿಕೊಳ್ಳಬೇಕಿದೆ. ವಿಶೇಷವಾಗಿ ಬೇಗನೆ ಕೊಳೆತು ಹೋಗುವ ಕೃಷಿ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಸಿಗುವಂತೆ ಮಾಡಬೇಕು. ಹಾಗಾದರೆ ಮಾತ್ರ ಈ ಜಾಗತಿಕ ಪಿಡುಗು ವಿರುದ್ಧದ ಹೋರಾಟದಲ್ಲಿ ನಾವು ನಮ್ಮನ್ನು ಉಳಿಸಿಕೊಳ್ಳಬಹುದು ಎಂದಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ಜನಸಾಮಾನ್ಯರ ಕಷ್ಟಗಳ ಬಗ್ಗೆ ಉಲ್ಲೇಖಿಸಿದ್ದು, ದಿನಗೂಲಿ ಕಾರ್ಮಿಕರುಮತ್ತು ಮಧ್ಯಮವರ್ಗದವರ ಉಳಿತಾಯದ ಹಣ ದಿನದಿಂದ ದಿನಕ್ಕೆ ಕ್ಷೀಣಿಸುತ್ತಾ ಬರುತ್ತಿದೆ.ಅವರವರ ಉಳಿವಿಗಾಗಿ ಬೇಕಾಗಿರುವ ವಸ್ತುಗಳನ್ನು ಪೂರೈಸಲು ಕೆಲವರಿಗೆ ಸಾಧ್ಯವಾಗುತ್ತಿಲ್ಲ. ಈ ವಿಷಯಗಳನ್ನು ಪ್ರಧಾನಿಯವರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT