ಇಡಗುಂಜಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಸಲ್ಲಿಸಿದ ದೇವೇಗೌಡ

7

ಇಡಗುಂಜಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಸಲ್ಲಿಸಿದ ದೇವೇಗೌಡ

Published:
Updated:
ಹೊನ್ನಾವರ ತಾಲ್ಲೂಕಿನ ಇಡಗುಂಜಿ ವಿನಾಯಕ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಹೊರಬಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಮಾತನಾಡಿಸಲು ಮುಗಿಬಿದ್ದ ಪಕ್ಷದ ಕಾರ್ಯಕರ್ತರು

ಹೊನ್ನಾವರ (ಉತ್ತರ ಕನ್ನಡ): ‘ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಇಡಗುಂಜಿ ವಿನಾಯಕನ ಸನ್ನಿಧಿಗೆ ಬಂದು ಪೂಜೆ ಸಲ್ಲಿಸುವುದಾಗಿ ಹಿಂದೆ ಹರಕೆ ಹೊತ್ತಿದ್ದೆ. ಅದನ್ನು ತೀರಿಸಿದ್ದೇನೆ’ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದರು.

ದೇವಸ್ಥಾನದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಅದು ಈಡೇರಿದರೆ ಮತ್ತೊಮ್ಮೆ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸುತ್ತೇನೆ’ಎಂದರು.

ದೇವಸ್ಥಾನದಲ್ಲಿ ನಡೆದ ಗಣಪತಿ ಹವನ, ಮಹಾಮಂಗಳಾರತಿಯಲ್ಲಿ ಪಾಲ್ಗೊಂಡರು. ಬಳಿಕ, ಮಂಗಳಮೂರ್ತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಮುಖಂಡ ಗಣಪಯ್ಯ ಗೌಡ ಅವರ ಪುತ್ರನ ಮದುವೆ ಸಮಾರಂಭದಲ್ಲಿ ಪಾಲ್ಗೊಂಡರು. ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಜೆಡಿಎಸ್ ಪಕ್ಷದ ಮತ್ತೊಬ್ಬ ಮುಖಂಡ ಶಂಭು ಗೌಡ ಅವರ ಗುಣವಂತೆಯ ಮನೆಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತನಾಡಿದರು.

ಪಕ್ಷದ ಮುಖಂಡರಾದ ಪ್ರದೀಪ ನಾಯ್ಕ, ಬಿ.ಆರ್.ನಾಯ್ಕ, ಸುಬ್ರಾಯ ಗೌಡ, ಆನಂದ ಅಸ್ನೋಟಿಕರ, ಜಿ.ಎನ್.ಗೌಡ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !