ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ಉಳಿವಿಗೆ ರಾಜೀನಾಮೆ ನೀಡಲು ಸಿದ್ಧ ಎಂದ ಜೆಡಿಎಸ್ ಸಚಿವರು

Last Updated 5 ಜೂನ್ 2019, 6:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಅಗತ್ಯ ಬಿದ್ದರೆ ರಾಜೀನಾಮೆ ನೀಡಲು ಸಿದ್ಧರಿರುವುದಾಗಿ ಜೆಡಿಎಸ್‌ನ ಎಲ್ಲ ಸಚಿವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಒಕ್ಕೊರಲಿನಿಂದ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಸಚಿವರು ಸರ್ಕಾರದ ಉಳಿವಿಗಾಗಿ ತಮ್ಮ ತೀರ್ಮಾನವನ್ನು ಪ್ರಕಟಿಸಿದರು. ಅಲ್ಲದೆ, 37 ಶಾಸಕರೂ ಒಗ್ಗಟ್ಟಾಗಿ ನಿಂತು ಸರ್ಕಾರವನ್ನು ಉಳಿಸಿಕೊಳ್ಳುವುದರ ಜತೆಗೆ ಪಕ್ಷವನ್ನು ಸದೃಢವಾಗಿ ಕಟ್ಟುವುದಕ್ಕೆ ಪಣ ತೊಟ್ಟರು.

ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ಜತೆ ಪರಸ್ಪರ ವಿಶ್ವಾಸದಿಂದ ನಡೆದುಕೊಳ್ಳಬೇಕು. ಎರಡೂ ಪಕ್ಷಗಳು ಒಂದು ವರ್ಷದಿಂದ ಒಟ್ಟಿಗೆ ಕೆಲಸ ಮಾಡಿಕೊಂಡು ಬಂದಿದ್ದೇವೆ. ಸಮ್ಮಿಶ್ರ ಸರ್ಕಾರ ಸಾಲ ಮನ್ನಾ ಸೇರಿದಂತೆ ಹಲವು ಉತ್ತಮ ಕೆಲಸಗಳನ್ನು ಮಾಡಿದೆ. ಅದನ್ನು ರಾಜ್ಯದ ಜನತೆಗೆ ತಲುಪಿಸುವ ಕೆಲಸ ಆಗಬೇಕು ಎಂದು ಕುಮಾರಸ್ವಾಮಿ ಶಾಸಕರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT