ಶುಕ್ರವಾರ, ನವೆಂಬರ್ 15, 2019
21 °C

ಬೆಂಗಳೂರಿಗೆ ಆಗಮಿಸಿದ ಸಿಎಂ: ಜೆಡಿಎಸ್‌ ಸಭೆಗೆ ಹಾಜರು

Published:
Updated:

ಬೆಂಗಳೂರು: ಕಾಲಭೈರವೇಶ್ವರನ ದೇಗುಲ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಅಮೆರಿಕದ ನ್ಯೂಜೆರ್ಸಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಎದುರಾಗಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಮರಳಿದರು. 

ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಸಚಿವರು, ಶಾಸಕರು ಬರಮಾಡಿಕೊಂಡರು. ಈ ವೇಳೆ ಶಿರಾ ಶಾಸಕ ಸತ್ಯನಾರಾಯಣ ಅವರೂ ಇದ್ದರು. ಸತ್ಯನಾರಾಯಣ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. 

ಮೊದಲಿಗೆ ದೆಹಲಿಗೆ ಆಗಮಿಸಿದ್ದ ಅವರು ನಂತರ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬಂದರು. ಅಲ್ಲಿಂದ ನೇರವಾಗಿ ತಾಜ್ ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿರುವ ಜೆಡಿಎಸ್‌ ಸಭೆಗೆ ಅವರು ತೆರಳಿದರು. 

ಈ ಸಭೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಸೇರಿದಂತೆ ಮಂತ್ರಿಗಳು, ಶಾಸಕರು, ಮುಖಂಡರು ಭಾಗವಹಿಸಿದ್ದಾರೆ. 

ಪ್ರತಿಕ್ರಿಯಿಸಿ (+)