ಬೆಳ್ಳಿ ಪದಕ ವಿಜೇತ ಕರ್ನಾಟಕ ವನಿತೆಯರ ತಂಡಕ್ಕೆ ಸಿಎಂ ಕುಮಾರಸ್ವಾಮಿ ಅಭಿನಂದನೆ

ಮಂಗಳವಾರ, ಜೂನ್ 25, 2019
29 °C
ಟಗ್‌ ಆಫ್‌ ವಾರ್‌ ಕ್ರೀಡಾಕೂಟ

ಬೆಳ್ಳಿ ಪದಕ ವಿಜೇತ ಕರ್ನಾಟಕ ವನಿತೆಯರ ತಂಡಕ್ಕೆ ಸಿಎಂ ಕುಮಾರಸ್ವಾಮಿ ಅಭಿನಂದನೆ

Published:
Updated:

ಬೆಂಗಳೂರು: ನೇಪಾಳದ ಕಠ್ಮಂಡುವಿನಲ್ಲಿ ನಡೆದ ರಾಷ್ಟ್ರೀಯ ಟಗ್ ಆಫ್ ವಾರ್ ಕ್ರೀಡಾಕೂಟದಲ್ಲಿ (480 kg ವಿಭಾಗದಲ್ಲಿ) ಬೆಳ್ಳಿ ಪದಕ ಪಡೆದು ಸಾಧನೆ ಮಾಡಿದ ಕರ್ನಾಟಕ ವನಿತೆಯರ ತಂಡದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಅಭಿನಂದಿಸಿದರು.

ವಿದ್ಯಾರ್ಥಿನಿಯರು ಈ ಸಾಧನೆ ಮಾಡಿರುವುದು ನಾಡಿಗೆ ಹೆಮ್ಮೆಯ ಸಂಗತಿ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.

ಎಂಟು ಜನರ ತಂಡದಲ್ಲಿ  ಬೆಂಗಳೂರು ಜೈನ್ ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಎಸ್ ತಗಡೂರು, ಭಾಗ್ಯಲಕ್ಷ್ಮಿ ಬಾಲಾಜಿ, ಹಾಸನದ ಇಂಚರ, ಸರೇನಾ ಅನೀಸ್, ಗುಣರ್ಪಿತ, ಜಯಶ್ರೀ, ಬಿ.ಜಿ.ಆಶಾ, ಮರಿಯಾ ಜನೀಫರ್, ದೀಕ್ಷಾ ಭಾಗವಹಿಸಿದ್ದರು. ರೋಹಿತ್ ಅವರು ವನಿತೆಯರ ತಂಡಕ್ಕೆ ತರಬೇತಿ ನೀಡಿದ್ದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಕ್ರೀಡಾಪಟುಗಳನ್ನು ಅಭಿನಂದಿಸಿದರು. ಮುಖ್ಯಮಂತ್ರಿಗಳ  ಮಾಧ್ಯಮ ಕಾರ್ಯದರ್ಶಿ ಎಚ್.ಬಿ.ದಿನೇಶ್ ಹಾಜರಿದ್ದರು.

ನೇಪಾಳದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ನಾಡಿಗೆ ಹೆಮ್ಮೆ ತಂದಿರುವ ವನಿತೆಯರ ತಂಡವನ್ನು ದೇಶ ಮತ್ತು ರಾಜ್ಯದ ಟಗ್ ಆಫ್ ವಾರ್ ಸಂಸ್ಥೆಗಳು ಅಭಿನಂದಿಸಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !