ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21ಕ್ಕೆ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ

Last Updated 3 ಜೂನ್ 2019, 20:56 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯಕ್ಕೆ ದಿನಾಂಕ ನಿಗದಿಪಡಿಸಿದ್ದು, ಜೂನ್ 21ರಿಂದ ಆರಂಭವಾಗಲಿದೆ.

ಮೈತ್ರಿ ಸರ್ಕಾರದ ಅವಧಿಯ ಮೊದಲ ಗ್ರಾಮ ವಾಸ್ತವ್ಯ ಇದಾಗಿದ್ದು, ಜೂನ್, ಜುಲೈನಲ್ಲಿ ನಾಲ್ಕು ದಿನಗಳ ಕಾಲ ಅವರು ಹಳ್ಳಿಯತ್ತ ಹೆಜ್ಜೆ ಹಾಕಲಿದ್ದಾರೆ.

ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ, ಗ್ರಾಮ ವಾಸ್ತವ್ಯದ ಸ್ವರೂಪದ ಬಗ್ಗೆ ಚರ್ಚಿಸಿದರು. ‘ಆಡಳಿತ ಚುರುಕುಗೊಳಿಸಲು ಮತ್ತು ಸರ್ಕಾರದ ಯೋಜನೆಗಳ ಅನುಷ್ಠಾನ ಕುರಿತು ಜನಾಭಿಪ್ರಾಯ ಪಡೆಯಲು ಇದು ಉತ್ತಮ ಅವಕಾಶ ಎಂದು ಭಾವಿಸಿದ್ದೇನೆ’ ಎಂದು ಕುಮಾರಸ್ವಾಮಿ ಅಧಿಕಾರಿಗಳಿಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT