ಶನಿವಾರ, ಫೆಬ್ರವರಿ 22, 2020
19 °C

ಎಚ್‌ಡಿಕೆ ಕೊಲೆ ಬೆದರಿಕೆ ಗಂಭೀರವಾಗಿ ಪರಿಗಣಿಸಿ ತನಿಖೆಯಾಗಬೇಕು: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆಯೊಡ್ಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರು ಅವರು, ‘ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆ ಪತ್ರ ಬರೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದರ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಭಯದ ವಾತಾವರಣ ಸೃಷ್ಟಿಸಿ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಗೊಳಿಸುವ ಯಾವುದೇ ಶಕ್ತಿಗಳಾದರೂ ಸರಿ ಅಂಥವರಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರನ್ನು ಇದೇ ತಿಂಗಳ 29ರಂದು ‘ಸಂಹಾರ’ ಮಾಡುವುದಾಗಿ ಬೆದರಿಕೆ ಪತ್ರವೊಂದು ಇತ್ತೀಚೆಗೆ ಅವರ ಮಠಕ್ಕೆ ಬಂದಿತ್ತು. ಬಜರಂಗದಳದ ಮಾಜಿ ನಾಯಕ ಮಹೇಂದ್ರಕುಮಾರ್‌, ನಿಡುಮಾಮಿಡಿ ವೀರಭದ್ರ ಸ್ವಾಮೀಜಿ, ಚಿತ್ರನಟ ಪ್ರಕಾಶ್‌ ರಾಜ್‌, ಚೇತನಕುಮಾರ್‌, ಬಿ.ಟಿ. ಲಲಿತಾ ನಾಯಕ, ಮಹೇಶ್ಚಂದ್ರ ಗುರು, ಭಗವಾನ್‌, ದಿನೇಶ ಅಮಿನ್‌ ಮಟ್ಟು, ರೌಡಿ ಅಗ್ನಿ ಶ್ರೀಧರ್‌, ಬೃಂದಾ ಕಾರಟ್‌ ಅವರನ್ನೂ ಹತ್ಯೆ ಮಾಡಲಾಗುವುದು ಎಂದು ಬೆದರಿಕೆ ಪತ್ರದಲ್ಲಿ ಉಲ್ಲೇಖವಾಗಿತ್ತು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು