ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು | ಕೇರಳ ನಡೆ ನಮಗೆ ಮಾದರಿಯಾಗಬಾರದೇಕೆ: ಕುಮಾರಸ್ವಾಮಿ

Last Updated 20 ಮಾರ್ಚ್ 2020, 6:42 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ದೇಶದಾದ್ಯಂತ ವ್ಯಾಪಕವಾಗಿ ಹಬ್ಬುತ್ತಿದ್ದು, ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಸರ್ಕಾರ ₹20,000 ಕೋಟಿ ವಿಶೇಷ ಪ್ಯಾಕೇಜ್‌ ಘೋಷಿಸಿದೆ. ಕೇರಳ ಕೈಗೊಂಡಿರುವ ಕ್ರಮವನ್ನು ನಮ್ಮ ರಾಜ್ಯದಲ್ಲೂ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಹರಡುವಿಕೆಯಿಂದ ರಾಜ್ಯದ ಮೇಲೆ ಆಗಿರುವ ಪರಿಣಾಮಗಳ ಕುರಿತು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಕೇರಳದಲ್ಲಿ 26 ಕೊರೊನಾ ಪ್ರಕರಣ ವರದಿಯಾಗಿದ್ದರೆ ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ. ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ. ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು ಎಂದು ಹೇಳಿದ್ದಾರೆ.

ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನಾ, ಮಾಸಾಶನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ‌ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ಸೋಂಕಿನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT