‘ನಾಮಪತ್ರ ವಿವಾದ ವರದಿ ನೋಡಿಲ್ಲ’

ಶನಿವಾರ, ಏಪ್ರಿಲ್ 20, 2019
31 °C

‘ನಾಮಪತ್ರ ವಿವಾದ ವರದಿ ನೋಡಿಲ್ಲ’

Published:
Updated:

ಬೆಂಗಳೂರು: ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಸಮರ್ಪಕವಾಗಿ ಪ್ರಕ್ರಿಯೆ ಅನುಸರಿಸಲಾಗಿದೆಯೇ ಎಂಬ ಬಗ್ಗೆ ವರದಿ ತರಿಸಿಕೊಂಡಿರುವ ಮುಖ್ಯ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಅದರ ಪರಾಮರ್ಶೆ ಇನ್ನಷ್ಟೇ ನಡೆಸಬೇಕು.

‘ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಸರಿಯಾದ ಕ್ರಮವನ್ನು ಅನುಸರಿಸಿಲ್ಲ. ನಿಖಿಲ್‌ ಕುಮಾರಸ್ವಾಮಿ ಹಳೇ ಮಾದರಿಯ ಪ್ರಮಾಣ ಪತ್ರ ಸಲ್ಲಿಸಿದ್ದರು. ನಾವು ಆಕ್ಷೇಪಣೆ ಸಲ್ಲಿಸಿದ ನಂತರ 20 ನಿಮಿಷಗಳಲ್ಲಿ ಪರಿಷ್ಕೃತ ಪ್ರಮಾಣ ಪತ್ರ ಸಲ್ಲಿಸಿದ್ದಾರೆ’ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಪರ ಏಜೆಂಟ್‌ ದೂರು ನೀಡಿದ್ದರು.

‘ಈ ಸಂಬಂಧ ವರದಿ ತಲುಪಿದೆ. ಆದರೆ ಅದನ್ನು ಇನ್ನೂ ಓದಿಲ್ಲ. ಅದರಲ್ಲಿ ಯಾವ ಮಾಹಿತಿ ಇದೆ ಎಂಬುದು ಗೊತ್ತಿಲ್ಲ’ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದರು.

ಮಂಡ್ಯ ಚುನಾವಣಾಧಿಕಾರಿ ನೀಡಿರುವ ವರದಿಯೇ ಅಂತಿಮ. ಆದರೆ, ಪ್ರಕ್ರಿಯೆ ಚುನಾವಣಾ ಆಯೋಗದ ನಿಯಮಾವಳಿಗೆ ಅನುಗುಣವಾಗಿ ನಡೆದಿದೆ ಎಂಬುದನ್ನು ಪರಿಶೀಲಿಸಲಿದ್ದಾರೆ ಎಂದು ಚುನಾವಣಾ ಆಯೋಗ ಮೂಲಗಳು ಹೇಳಿವೆ.

‘ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪುತ್ರನ ಪರವಾಗಿ ಜಿಲ್ಲಾ ಚುನಾವಣಾಧಿಕಾರಿ ಶ್ರಮಿಸುತ್ತಿದ್ದಾರೆ. ಅದಕ್ಕಾಗಿ ನಿಯಮಾವಳಿಗಳನ್ನು ಗಾಳಿಗೆ ತೂರಿದ್ದಾರೆ’ ಎಂದು ಸುಮಲತಾ ಆರೋಪಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !