ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆ | ಪಕ್ಷದ ಹಿತದೃಷ್ಟಿಯಿಂದ ಗೋವಿಂದರಾಜುಗೆ ಟಿಕೆಟ್: ಎಚ್‌ಡಿಕೆ

Last Updated 18 ಜೂನ್ 2020, 7:46 IST
ಅಕ್ಷರ ಗಾತ್ರ

ಬೆಂಗಳೂರು:‘ಗೋವಿಂದರಾಜು ಕೋಲಾರ ಮೂಲದ ಸಾಮಾನ್ಯ ಕಾರ್ಯಕರ್ತ. ಕೋಲಾರ ಭಾಗದಲ್ಲಿ ಪಕ್ಷದ ಹಿತದೃಷ್ಟಿಯಿಂದ ಅವರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ- ಕೋಲಾರ ಭಾಗದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಶಕ್ತಿ ಸಿಗಲಿದೆ. ಪಕ್ಷದ ಹಿತದೃಷ್ಟಿಯಿಂದ ಅವರಿಗೆ ನಾವು ಟಿಕೆಟ್ ನೀಡಿದ್ದೇವೆ’ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ನಿಸರ್ಗ ಗೋವಿಂದರಾಜು ಅವರು, ‘ನಾಮಪತ್ರ ಸಲ್ಲಿಸುವುದಕ್ಕೆ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಈ ಆಯ್ಕೆನಡೆದಿದೆ’ಎಂದರು.

‘ಚೀನಾ ಜತೆಗಿನ ಬಿಕ್ಕಟ್ಟನ್ನು ಪ್ರಸ್ತಾಪಿಸಿದ ಅವರು, ಇಂಥ ಸಂದರ್ಭದಲ್ಲಿ ವೀರಾವೇಶದ ಮಾತಗಳನ್ನ ಆಡಬಾರದು ಆದಷ್ಟು ಮಾತುಕತೆ ಮುಖಾಂತರ ಸಮಸ್ಯೆ ಬಗೆಹರಿಸಕೊಳ್ಳಬೇಕು ಹುತಾತ್ಮ ಆದ ಯೋಧರಿಗೆ ಹೆಚ್ಚಿನ ನೆರವು ಸರ್ಕಾರಗಳು ನೀಡಬೇಕು’ ಎಂದರು.

ಚೀನಾ ವಸ್ತುಗಳ ಬಹಿಷ್ಕಾರ ಪ್ರಸ್ತಾಪಿಸಿ, ‘ಪ್ರಚಾರ ಮಾಡಿಕೊಂಡು ಯಾಕೆ ಮಾಡಬೇಕು? ನಮ್ಮ ಸಾಮರ್ಥ್ಯ ಮೊದಲು ಹೆಚ್ಚಿಸಿಕೊಳ್ಳಬೇಕು. ಪ್ರತಿನಿತ್ಯ ಚೀನಾ ವಸ್ತುಗಳ ಮೇಲೆ ಜನರು ಅವಲಂಬಿತರಾಗಿದ್ದಾರೆ. ನಮ್ಮಲ್ಲಿ‌ ವಸ್ತುಗಳ ಉತ್ಪಾದನೆ ಮಾಡಿಕೊಳ್ಳಲು ಮೊದಲು ಗಮನ ಕೊಡಬೇಕು‌. ಪ್ರಚಾರಕ್ಕಾಗಿ ಶೋ ಮಾಡಲು ಗೆಲುವು ಸಾಧ್ಯ ಇಲ್ಲ. ಇಂತಹ ವಿಚಾರದಲ್ಲಿ ಸೈಲೆಂಟಾಗಿ ನಮ್ಮ‌ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು’ ಎಂದರು.

ಕಳೆದ ಹಲವು ದಿನಗಳಿಂದ ಗಡಿ ಭಾಗದಲ್ಲಿ ಭಾರತ- ಚೀನಾ ನಡುವೆ ಸಂಘರ್ಷ ಆಗ್ತಿದೆ ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ
ಭಾರತಕ್ಕೆ ಇದು ಸಂಕಷ್ಟದ ಸಮಯ. ಕೊರೊನಾ ದಿಂದ ನಮ್ಮ‌‌ ದೇಶದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಇದು ಯುದ್ಧ ಮಾಡುವ ಸಮಯ ಅಲ್ಲ. ಮಾತುಕತೆ ಮುಖಾಂತರ ಶಾಂತಿ ಕಾಪಾಡಬೇಕಿದೆಎಂದು ಅಭಿಪ್ರಾಯಪಟ್ಟರು .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT